ಕಲ್ಪ ಮೀಡಿಯಾ ಹೌಸ್ | ಪುತ್ತೂರು |
ಕೊಲ್ಲಿ ಯುದ್ಧದ #Gulf war ಪರಿಣಾಮ ರಾಜ್ಯದಲ್ಲಿ ಉಂಟಾಗಿರುವ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ #Gas cylinder shortage ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ಪುತ್ತೂರು ಫುಡ್ ಫೆಸ್ಟ್’ನ್ನು #Puttur Food Fest ಮುಂದೂಡಲಾಗಿದೆ.
ಈ ಕುರಿತಂತೆ ಪುತ್ತೂರು ಫುಡ್ ಫೆಸ್ಟ್ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಲಾಗಿದೆ.
ದೇಶದಾದ್ಯಂತ ಉಂಟಾಗಿರುವ ಗ್ಯಾಸ್ ಸಿಲಿಂಡರ್ ಅಭಾವದ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣಗಳಿಂದಾಗಿ ಈ ಬಾರಿಯ `ಪುತ್ತೂರು ಫುಡ್ ಫೆಸ್ಟ್’ ಅನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.
ನಮ್ಮ ಮಳಿಗೆದಾರರಿಗೆ ಮತ್ತು ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಈ ಮೊದಲು ದರ್ಬೆಯ ಸೇಂಟ್ ಫಿಲೋಮಿನಾ ಕಾಲೇಜಿನ ಎದುರಿನ ರಸ್ತೆಯಲ್ಲಿ ಮಾರ್ಚ್ 13, 14, 15ರಂದು ಪುತ್ತೂರು ಫುಡ್ ಫೆಸ್ಟ್ ಅನ್ನು ಆಯೋಜಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















