ಕಲ್ಪ ಮೀಡಿಯಾ ಹೌಸ್ | ಶಿಕಾಳಕೊಪ್ಪ |
ಇಲ್ಲಿನ ಅಕ್ರಮ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆಯಾಗಿದೆ.
ಅಕ್ರಮವಾಗಿ ಗೋವುಗಳನ್ನು ತಂದು ಕಸಾಯಿಕಾನೆಯಲ್ಲಿ ಗೋವಿನ ವಧೆ ನಡೆಸಿ ಅದರ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯ ಆಧಾರದ ಮೇರೆಗೆ ಪಿಎಸ್’ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 100 ಕೆಜಿ ಗೋಮಾಂಸ ಪತ್ತೆಯಾಗಿದೆ.
ಶಿರಾಳಕೊಪ್ಪದ ಹಳ್ಳೂರು ವೃತ್ತದ ಬಳಿ ಮನೆಯೊಂದರಲ್ಲಿ ಗೋವುಗಳ ಮಾಂಸ ಮಾರಾಟ ಮಾಡಲಾಗುತ್ತಿದೆ.
4 ಜನರ ವಿರುದ್ಧ ಎಫ್’ಐಆರ್ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















