ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಜನಮಾನಸದಲ್ಲಿ ಉತ್ತಮ ಹೆಸರು ಮಾಡಿರುವ ಸುರೇಖ ಮುರಳೀಧರ್ ಅವರಿಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ ಅರಸಿ ಬಂದಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸೀನಿಯರ್ ಚೇಂಬರ್ ಇಂಟರ್’ನ್ಯಾಷನಲ್’ನ 2025-26 ರ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಆ ಸಂದರ್ಭದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಸರ್ವ ಕ್ಷೇತ್ರಗಳಲ್ಲಿಯೂ ಅತ್ಯುತ್ತಮ ಸೇವೆ ಮಾಡಿದ ಸೀನಿಯರ್ ಸುರೇಖ ಮುರಳೀಧರ್ ಅವರಿಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷರು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಎಂ.ಆರ್. ಜಯೇಶ, ಶಾಸಕರಾದ ಕೃಷ್ಣಪ್ಪ, ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಜೆಸಿಐ ಪೂರ್ವ ರಾಷ್ಟ್ರೀಯ ಅಧ್ಯಕ್ಷರಾದ ಜೆಸಿ. ಟಿವಿಎನ್ ಮೂರ್ತಿ, ಅವಧೂತ ವಿನಯ್ ಗುರುಜೀ ಅವರು ಹಾಗೂ ವಿಶ್ವದಾದ್ಯಂತ ಆಗಮಿಸಿದ ಸಾವಿರಾರು ಸದಸ್ಯರು ಭಾಗವಹಿಸಿದ್ದರು.
ಈ ಕುರಿತಂತೆ ಮಾತನಾಡಿರುವ ಸುರೇಖ ಮುರಳೀಧರ್, ಈ ಪ್ರಶಸ್ತಿಯು ಲಭಿಸಿರುವುದು ಸಂತಸ ಹಾಗೂ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸಮಾಜಮುಖಿಯಾಗಿ ನಿಲ್ಲಲು ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಸಂಸ್ಥೆಯ ಆದರ್ಶ ಹಾಗೂ ತತ್ವ ಸದಾ ಮಾದರಿಯಾಗಿವೆ. ಅತ್ಯುತ್ತಮ ಸೇವೆ ಸಲ್ಲಿಸಿ, ಪ್ರಶಸ್ತಿಗೆ ಭಾಜನರಾಗಲು ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















