ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ರಸ್ತೆ ತಿರುವಿನಲ್ಲಿ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ.
ಲಾರಿಯನ್ನು ವೇಗವಾಗಿ ಚಲಾಯಿಸುತ್ತಿದ್ದ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ #Lorry overturned ಎಂದು ವರದಿಯಾಗಿದೆ.
ಲಾರಿಯು ಸುಮಾರು 50 ಅಡಿ ಎತ್ತರದಿಂದ ಲಾರಿ ಪಲ್ಟಿಯಾಗಿ ಬಿದ್ದಿದ್ದು, ಬಿದ್ದ ರಭಸಕ್ಕೆ ಲಾರಿಯ ಕೆಲವು ಭಾಗಗಳು ಪುಡಿಪುಡಿ ಆಗಿವೆ.
ಅಲ್ಲದೇ, ಮನೆಯ ಪಕ್ಕದಲ್ಲೇ ಬಂದು ಲಾರಿ ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಒಂದು ವೇಳೆ ಮನೆ ಮೇಲೆ ಲಾರಿ ಬಿದ್ದಿದ್ದರೆ ದೊಡ್ಡ ಅನಾಹುತ ಆಗುವ ಸಾಧ್ಯತೆ ಇತ್ತು.
ಇನ್ನು ಲಾರಿಯೊಳಗೆ ಸಿಲುಕಿದ್ದ ಡ್ರೈವರ್’ನನ್ನು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಸ್ಥಳೀಯರು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















