ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ #Electrical short circuit ತೋಟದಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ಪಟಮಕ್ಕಿ ರಾಮಸ್ವಾಮಿ ಎಂಬುವರ ತೋಟದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ತೋಟದಲ್ಲಿ ಅಳವಡಿಸಿದ್ದ ಡ್ರೀಪ್ ಪೈಪು ಮರದ ತುಂಡುಗಳು, ಪಿವಿಸಿ ಪೈಪ್ ಗಳು ಮತ್ತು ಅಡಿಕೆ ಸಸಿಗಳು ಬೆಂಕಿಯಿಂದ ಹಾನಿಗೊಳಗಾಗಿವೆ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಭೇಟಿ ನೀಡಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಹಲವು ದಿನಗಳಿಂದ ವಿದ್ಯುತ್ ಶಾರ್ಟ್ ಆಗಿ ಹಲವೆಡೆ ಬೆಂಕಿ ಹತ್ತಿಕೊಳ್ಳುತ್ತಿದ್ದು ಈ ಬಗ್ಗೆ ಎಚ್ಚರಿಕೆವಹಿಸಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















