No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2026
in ಶಿಕಾರಿಪುರ
0
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿಜ್ಞಾನ #Science ಶಿಕ್ಷಣವು ಕೇವಲ ಪುಸ್ತಕಗಳಲ್ಲಿ ಓದುವ ವಿಷಯವಲ್ಲ, ಅದು ಅನುಭವಿಸುವ ಮತ್ತು ಅನ್ವೇಷಿಸುವ ಪ್ರಕ್ರಿಯೆಯಾಗಿದೆ ಎಂದು ಸರ್ಕಾರಿ ಬಾಯ್ಸ್ ಜೂನಿಯರ್ ಕಾಲೇಜ್ ನಿವೃತ್ತ ಉಪ ಪ್ರಾಂಶುಪಾಲ ಟಿ.ಎಂ. ಪಾರ್ಥಸಾರಥಿ ತಿಳಿಸಿದರು.

ಇಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ #Kumadvathi Education Institution ಹಾಗೂ ಕುಮದ್ವತಿ ಕೇಂದ್ರೀಯ ವಸತಿ ಶಾಲೆ ಹಾಗೂ ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ, NCERT ಪಠ್ಯಕ್ರಮವನ್ನು ಆಧರಿಸಿದ ಒಂದು ದಿನದ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ ಕಾರ್ಯಾಗಾರ ಯಶಸ್ವಿಯಾಗಿ ಕುಮದ್ವತಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡಿದರು.
ವಿಜ್ಞಾನವನ್ನು ಪರಿಣಾಮಕಾರಿಯಾಗಿ ಕಲಿಯಲು ಪ್ರಯೋಗಗಳು ಅತ್ಯಂತ ಮುಖ್ಯವಾದ ಪಾತ್ರವಹಿಸುತ್ತವೆ ಹಾಗೂ ನೇರವಾಗಿ ಗಮನಿಸಿ ವಿಜ್ಞಾನದ ತತ್ವಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರವಿ ಕೆ.ಎಸ್. ಅಧ್ಯಕ್ಷರು ಹಿರಿಯ ವಿದ್ಯಾರ್ಥಿಗಳ ಸಂಘ ಕುಮದ್ವತಿ ಶಿಕ್ಷಣ ಮಹಾ ವಿದ್ಯಾಲಯ ಶಿಕಾರಿಪುರ ಹಾಗೂ ಸಹ ಶಿಕ್ಷಕರು ಎಸ್ ಎಸ್ ಕಂಪೋಸಿಟ್ ಪಿಯು ಕಾಲೇಜ್ ಸುಣಕಲ್ ಬಿದರಿ ರಾಣೆಬೆನ್ನೂರು ಅವರು ಮಾತನಾಡಿ, ವಿಜ್ಞಾನ ಶಿಕ್ಷಕರು ಪಾಠ ಬೋಧಿಸುವಾಗ ಕೇವಲ ಸಿದ್ಧಾಂತವನ್ನು ಹೇಳುವುದಷ್ಟೇ ಸಾಲದು; ಸಾಧ್ಯವಾದಷ್ಟು ಪ್ರಾಯೋಗಿಕವಾಗಿ ತೋರಿಸುವುದು ಅಗತ್ಯ ಹಾಗೂ ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳ ಕಲ್ಪನಾಶಕ್ತಿ ವಿಸ್ತರಿಸಿ, ವಿಷಯದ ಬಗ್ಗೆ ಸ್ಪಷ್ಟವಾದ ಅರಿವು ಮೂಡುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳಾದ ಡಾ. ಶಿವಕುಮಾರ್ ಜಿ.ಎಸ್. ಅವರು ಮಾತನಾಡಿ, ಇಂದಿನ ಜಗತ್ತಿನಲ್ಲಿ ಅನೇಕ ಹೊಸ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿವೆ. ವಿಜ್ಞಾನವೆಂದರೆ ಕೇವಲ ಪ್ರಯೋಗಾಲಯಕ್ಕೆ ಸೀಮಿತವಾದ ವಿಷಯವಲ್ಲ; ಅದು ನಮ್ಮ ಸುತ್ತಮುತ್ತಲಿನ ಪ್ರಪಂಚದ ಪ್ರತಿಯೊಂದು ಘಟನೆಯಲ್ಲಿ ಅಡಗಿದೆ ಎಂದರು. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನವನ್ನು ಕೇವಲ ಓದುವ ವಿಷಯವಾಗಿ ನೋಡುವುದನ್ನು ಬಿಟ್ಟು, ಅದನ್ನು ಜೀವನದ ಭಾಗವಾಗಿ ಅರ್ಥಮಾಡಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜ್ಞಾನ ಶಿಕ್ಷಣದಲ್ಲಿ ಪ್ರಯೋಗಗಳಿಗೆ ಪ್ರಮುಖ ಸ್ಥಾನ ನೀಡುವುದರಿಂದ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಂಶೋಧನಾ ಮನೋಭಾವ, ತಾರ್ಕಿಕ ಚಿಂತನೆ ಹಾಗೂ ಸಮಸ್ಯೆ ಪರಿಹರಿಸುವ ಕೌಶಲಗಳು ಬೆಳೆಯುತ್ತವೆ. ಪ್ರಶ್ನೆ ಮಾಡುವ ಮನೋಭಾವ ಮತ್ತು ಸ್ವತಃ ಪ್ರಯೋಗಗಳನ್ನು ಮಾಡುವ ಆಸಕ್ತಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಅವರ ಭವಿಷ್ಯವನ್ನು ಬಲಪಡಿಸಲು ಸಹ ಸಹಕಾರಿಯಾಗುತ್ತದೆ.

ಇಂತಹ ಕಾರ್ಯಾಗಾರಗಳು ಶಿಕ್ಷಕರಿಗೂ ವಿದ್ಯಾರ್ಥಿಗಳಿಗೂ ತುಂಬಾ ಉಪಯುಕ್ತವಾಗಿವೆ. ವಿಶೇಷವಾಗಿ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಆಧರಿಸಿದ ಪ್ರಯೋಗಗಳನ್ನು ನೇರವಾಗಿ ನೋಡಿ ತಿಳಿದುಕೊಳ್ಳುವ ಅವಕಾಶ ದೊರಕುವುದು, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದರ ಮೂಲಕ ತರಗತಿ ಬೋಧನೆ ಇನ್ನಷ್ಟು ಪರಿಣಾಮಕಾರಿಯಾಗಬಹುದು.

ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಕುಮದ್ವತಿ ರೆಸಿಡೆನ್ಸಿಯಲ್‌ ಸೆಂಟ್ರಲ್‌ ಸ್ಕೂಲ್‌, ಶಿಕಾರಿಪುರದ 9ನೇ ತರಗತಿ ವಿದ್ಯಾರ್ಥಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಹಾಗು ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಬೋಧಕ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಜ್ಞಾನ ವಿಭಾಗದ ಪ್ರಶಿಕ್ಷಕರಾದ ಡಾ. ಯದುಕುಮಾರ ಎಂ, ಡಾ.ನಾಗೇಂದ್ರಪ್ಪ, ಇವರು ಕಾರ್ಯಕ್ರಮವನ್ನು ಉತ್ತಮವಾಗಿ ನೆರವೇರಿಸಿಕೊಟ್ಟರು. ಈ ಕಾರ್ಯಕ್ರಮವನ್ನು ಕಾವ್ಯ ಸುಣಗಾರ್ ತಂಡದವರು ಪ್ರಾರ್ಥಿಸಿ, ಎಂ ಜಿ ಚಂದನ್ ಸಹ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKumadvathi Education InstitutionLatestNewsKannadaLocalNewsMalnadNewsNCERTNews in KannadaNews KannadaSciencShikaripuraShimogaShivamoggaNewsಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಮಲೆನಾಡು_ಸುದ್ಧಿವಿಜ್ಞಾನಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

Next Post

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

March 14, 2026
ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

March 14, 2026
ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

ತೀರ್ಥಹಳ್ಳಿ | ತೋಟದಲ್ಲಿ ಬೆಂಕಿ: ಅಡಿಕೆ ಸಸಿ, ಕೃಷಿ ಪರಿಕರಗಳು ಅಗ್ನಿಗಾಹುತಿ

March 14, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL