ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಯುಗಾದಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಹುಬ್ಬಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ ನಡೆಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಎಸ್’ಎಸ್’ಎಸ್ ಹುಬ್ಬಳ್ಳಿ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.
ಸಂಖ್ಯೆ 07311 ರೈಲು, ಭಾನುವಾರ, 2026ರ ಮಾರ್ಚ್ 22ರಂದು ಸಂಜೆ 6.15 ಕ್ಕೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಸೋಮವಾರ ಬೆಳಗ್ಗೆ 9.00 ಕ್ಕೆ ಬೆಂಗಳೂರು ತಲುಪಲಿದೆ. ಇದು ಕೊಪ್ಪಳ, ಹೊಸಪೇಟೆ, ಬಳ್ಳಾರಿ ಹಾಗೂ ಚಿತ್ರದುರ್ಗ ಮಾರ್ಗವಾಗಿ ಸಂಚರಿಸಲಿದೆ.
ಅದೇ ರೀತಿ ಸಂಖ್ಯೆ 07312 ರೈಲು, 2026ರ ಮಾರ್ಚ್ 23ರ ಸೋಮವಾರದಂದು ಬೆಳಗ್ಗೆ 10.00 ಕ್ಕೆ ಬೆಂಗಳೂರಿನಿಂದ ಹೊರಟು , ಅದೇ ದಿನ ಸಂಜೆ 7.40 ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದೆ. ಇದು ಅರಸಿಕೇರಿ, ದಾವಣಗೇರಿ ಮೂಲಕ ಸಂಚರಿಸಲಿದೆ.
ಈ ರೈಲುಗಳು ಒಟ್ಟು 19 ಎಲ್‌ಎಚ್ಬಿ ಬೋಗಿಗಳು ಹೊಂದಿರುತ್ತವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















