ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಈಜಲು ತೆರಳಿದ್ದ ಇಬ್ಬರು ಸಹೋದರರು ತುಂಗಭದ್ರಾ ನದಿಯಲ್ಲಿ ನೀರು ಪಾಲಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಹಲವಾಗಲು ಬಳಿಯಲ್ಲಿ ನಡೆದಿದೆ.
ಮೃತರನ್ನು ಎಂ.ಜಿ. ಮನು(19) ಮತ್ತು ಎಂ.ಜಿ. ಪ್ರಜ್ವಲ್(18) ಎಂದು ಗುರುತಿಸಲಾಗಿದೆ. ನದಿಯಲ್ಲಿ ಮುಳುಗುತ್ತಿದ್ದ ಕಿರಿಮಗ ಚಿರಂಜೀವಿಯನ್ನು ತಂದೆ ಮಂಜಪ್ಪ ರಕ್ಷಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದ ಬಳಿಯ ತುಂಗಭದ್ರ ನದಿಗೆ ಮೂವರು ಸಹೋದರರು ಕೆರೆಗೆ ಈಜಾಡಲು ಹೋಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.
ತಂದೆ ಕಣ್ಣೆದುರೇ ಇಬ್ಬರು ಮಕ್ಕಳು ಜಲ ಸಮಾಧಿಯಾಗಿದ್ದಾರೆ. ಇನ್ನೊಬ್ಬ ಮಗನನ್ನು ರಕ್ಷಿಸಲಾಗಿದೆ. ಮೃತ ಮನು ಬಿಇ ವಿದ್ಯಾರ್ಥಿಯಾಗಿದ್ದು, ಪ್ರಜ್ವಲ್ ಪಿಯು ಓದುತ್ತಿದ್ದ.
ತುಂಗಭದ್ರಾ ನದಿಯಿಂದ ಸ್ಥಳೀಯರು ಇಬ್ಬರ ಶವ ಹೊರತೆಗೆದಿದ್ದಾರೆ. ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.
ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















