ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿಲಿಂಡರ್ ಸಮಸ್ಯೆಯಿಂದಾಗಿ ಆತಂಕದಲ್ಲಿದ್ದ ಹೋಟೆಲ್ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಜೊತೆಯಲ್ಲಿ ಒಂದು ಕಂಡೀಷನ್ ಸಹ ಹಾಕಿದೆ.
ಹೌದು… ಈ ಕುರಿತಂತೆ ಮಾತನಾಡಿರುವ ಸಚಿವ ಕೆ.ಎಚ್. ಮುನಿಯಪ್ಪ, #KHMuniyappa ರಾಜ್ಯದಲ್ಲಿ ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಇಂದು ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುವರಿಯಾಗಿ ಕಮರ್ಷಿಯಲ್ ಸಿಲಿಂಡರ್ #CommercialCylinder ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ ಎಂದಿದ್ದಾರೆ.
10 ಸಾವಿರ ಸಿಲಿಂಡರ್’ನಲ್ಲಿ ಕಮರ್ಷಿಯಲ್ ಗ್ಯಾಸ್ ವ್ಯಾಪ್ತಿಗೆ ಬರುವ ಎಲ್ಲಾ ವಲಯಕ್ಕೆ ಹಂಚಿಕೆ ಆಗುತ್ತೆ. ಅದರಲ್ಲಿ ಹೋಟೆಲ್, ಇಂದಿರಾ ಕ್ಯಾಂಟೀನ್, ಪಿಜಿ ಇನ್ನಿತರ ವಲಯಕ್ಕೂ ಹಂಚಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಮುಂದಿನ ಸೋಮವಾರ ಮತ್ತೆ ಹೋಟೆಲ್ ಮಾಲೀಕರ ಜತೆ ಸಭೆ ನಡೆಸಲಾಗುವುದು. ಕಳೆದ ವಾರ ಒಂದು ಸಾವಿರ ಸಿಲಿಂಡರ್ ಹೋಟೆಲ್’ಗೆ ನೀಡಲಾಗುತ್ತಿತ್ತು. ಸದ್ಯ ಹೋಟೆಲ್, ಡಾಬಾ, ಹಾಸ್ಟೆಲ್, ಇಂದಿರಾ ಕ್ಯಾಂಟೀನ್’ಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರಿಜಿಸ್ಟರ್ ಕಡ್ಡಾಯ
ಇನ್ನು, ಕಮರ್ಷಿಯಲ್ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ರಿಜಿಸ್ಟರ್ ಮಾಡಿಸಬೇಕು. ಗೇಲ್ ಕಂಪನಿಗೆ ರಿಜಿಸ್ಟರ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದಿದ್ದಾರೆ.
ಒಂದು ವಾರದೊಳಗೆ ರಿಜಿಸ್ಟರ್ ಮಾಡಬೇಕಿದ್ದು, ಅಕ್ರಮ ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















