ಕಲ್ಪ ಮೀಡಿಯಾ ಹೌಸ್ | ಅಮೆರಿಕಾ |
ಇಲ್ಲಿನ ನ್ಯೂಯಾರ್ಕ್ ನಗರದ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ದುರಂತ #Plane crashes during landing ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಾಂಟ್ರಿಯಲ್’ನಿಂದ ಹೊರಟಿದ್ದ ಸಿಆರ್’ಜೆ-900 #CRJ-900 ಮಾದರಿಯ ವಿಮಾನವು ಲ್ಯಾಂಡಿಂಗ್ ವೇಳೆ ರನ್’ವೇ 4ರಲ್ಲಿ ಇಳಿಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲ್ಯಾಂಡಿಂಗ್ ಪ್ರಕ್ರಿಯೆ ವೇಳೆ ರನ್ ವೇಯಲ್ಲಿದ್ದ ಫೈರ್ ಟ್ರಕ್’ಗೆ ವಿಮಾನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ವಿಮಾನದ ಮುಂಭಾಗ ಭಾರೀ ಹಾನಿಗೊಳಗಾಗಿದೆ.
ಅಪಘಾತದ ತಕ್ಷಣವೇ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಎಲ್ಲಾ ಒಳಬರುವ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ತುರ್ತುವಾಗಿ ಆರಂಭಗೊAಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ವಿಮಾನದ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















