ಕಲ್ಪ ಮೀಡಿಯಾ ಹೌಸ್ | ಆಗುಂಬೆ |
ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿದ್ದು, ಪರಿಣಾಮವಾಗಿ ವಾಹನ ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿತ್ತು.
ತೀರ್ಥಹಳ್ಳಿ – ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ. ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಘಾಟ್’ನಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ, ಕೆಲವು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಬಹುದು ಎನ್ನಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















