ಕಲ್ಪ ಮೀಡಿಯಾ ಹೌಸ್ | ಮೈಸೂರು |
ಒಣಗಿದ ದಾಸವಾಳದ hibiscus ಹೂವನ್ನು ನುಂಗಿದ ಪರಿಣಾಮ, ಆರೂವರೆ ತಿಂಗಳ ಹಸುಗೂಸು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು.
ಘಟನೆ ಹಿನ್ನೆಲೆ
ಶನಿವಾರ ಚಿನ್ಮಯಿ ತನ್ನ ಅಣ್ಣನೊಂದಿಗೆ ಮನೆಯ ಹೊಸಲಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹೊಸ್ತಿಲ ಮೇಲಿದ್ದ ಒಣಗಿದ ದಾಸವಾಳದ ಹೂವಿನ ತುಂಡನ್ನು ಮಗು ಬಾಯಿಗೆ ಹಾಕಿಕೊಂಡಿದೆ. ತನ್ನ ಅಣ್ಣ ಅದನ್ನು ಕಿತ್ತುಕೊಳ್ಳುತ್ತಾನೆಂಬ ಭಯದಿಂದ ಮಗು ಹೂವನ್ನು ನುಂಗಿದೆ.
ಹೂವು ಗಂಟಲಿನಲ್ಲಿ ಸಿಲುಕಿ ಮಗುವಿಗೆ ಉಸಿರಾಟದ ತೊಂದರೆ ಉಂಟಾಯಿತು. ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















