ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗುಡ್ ಫ್ರೈಡೆ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕೇರಳದ ಕರಾವಳಿ ನಗರಿ ಕಣ್ಣೂರು ನಡುವೆ ಮಂಗಳೂರು ಜಂಕ್ಷನ್ #MangaloreJunction ಮಾರ್ಗವಾಗಿ ಒಂದು ಟ್ರಿಪ್ ವಿಶೇಷ ರೈಲನ್ನು ಕಾರ್ಯಾಚರಣೆಗೊಳಿಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ವಿಶೇಷ ರೈಲು ಸಂಚಾರದ ವಿವರಗಳು ಹೀಗಿವೆ.
Also Read: ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು
06551 ಸಂಖ್ಯೆಯ ಯಶವಂತಪುರ-ಕಣ್ಣೂರು ವಿಶೇಷ ಎಕ್ಸ್’ಪ್ರೆಸ್ ರೈಲು 2026ರ ಎಪ್ರಿಲ್ 2ರ ಗುರುವಾರ ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಎಪ್ರಿಲ್ 3ರ ಶುಕ್ರವಾರ ಮುಂಜಾನೆ 3.00 ಗಂಟೆಗೆ ಕಣ್ಣೂರು ತಲುಪಲಿದೆ.
ಮರಳಿ ಪ್ರಯಾಣದಲ್ಲಿ, 06552 ಸಂಖ್ಯೆಯ ಕಣ್ಣೂರು-ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಏಪ್ರಿಲ್ 3ರ ಶುಕ್ರವಾರ ಬೆಳಿಗ್ಗೆ 8.45ಕ್ಕೆ ಕಣ್ಣೂರಿನಿಂದ ಹೊರಟು, ಅದೇ ದಿನ ರಾತ್ರಿ 9.30ಕ್ಕೆ ಯಶವಂತಪುರವನ್ನು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಮಂಗಳೂರು ಜಂಕ್ಷನ್, ಕಾಸರಗೋಡು, ಕಾಂಜನಗಾಡ್ ಮತ್ತು ಪಯ್ಯನ್ನೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು ಒಟ್ಟು 21 ಬೋಗಿಗಳನ್ನು ಹೊಂದಿರಲಿದ್ದು, ಅವುಗಳಲ್ಲಿ 2 ಎಸಿ ಟು-ಟಯರ್, 6 ಎಸಿ ತ್ರೀ-ಟಯರ್, 7 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ 2 ಲಗೇಜ್ ಕಮ್ ಜನರೇಟರ್ ಕಾರ್ ಮತ್ತು ಬ್ರೇಕ್ ವ್ಯಾನ್’ಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















