ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಯುವಕನ ಆತ್ಮಹತ್ಯೆಗೆ ಕಾರಣರಾದ ಭದ್ರಾವತಿಯ ಮಲ್ಲಾಪುರ ಗ್ರಾಮದ ಇಬ್ಬರು ವ್ಯಕ್ತಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, Rigorous imprisonment ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮಲ್ಲಾಪುರ ಗ್ರಾಮದ ನಿವಾಸಿಗಳಾದ ನಾಗರಾಜ್ ರಾವ್ (26) ಹಾಗೂ ಮಂಜೋಜಿ ರಾವ್ (50) ಶಿಕ್ಷೆಗೆ ಗುರಿಯಾದವರು. ಜೈಲು ಶಿಕ್ಷೆಯ ಜೊತೆಗೆ 2.23 ಲಕ್ಷ ರೂ. ದಂಡ ವಿಧಿಸಲಾಗಿದೆ. 1.50 ಲಕ್ಷ ರೂ.ಗಳನ್ನು ಮೃತ ಯುವಕನ ತಂದೆಗೆ ಪರಿಹಾರ ವಿತರಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಮಲ್ಲಾಪುರ ಗ್ರಾಮದ ನಿವಾಸಿಯಾದ ನವೀನ್ ಕುಮಾರ್ (22) ಎಂಬ ಯುವಕ, ಜೈಲು ಶಿಕ್ಷೆಗೆ ಗುರಿಯಾದ ಸದರಿ ವ್ಯಕ್ತಿಗಳ ಕುಟುಂಬಕ್ಕೆ ಸೇರಿದ ಹುಡುಗಿಯ ಮೊಬೈಲ್ ಪೋನ್ ಗೆ ಸಂದೇಶ ಕಳುಹಿಸಿದ್ದ. ಈ ಕುರಿತು ಸದರಿ ವ್ಯಕ್ತಿಗಳು ಯುವಕನ ಮೇಲೆ ಹಲ್ಲೆ ನಡೆಸಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಜೀವ ಉಳಿಸಿಕೊಳ್ಳಬೇಕಾದರೆ ಊರು ಬಿಟ್ಟು ಹೋಗಬೇಕು ಎಂದು ಬೆದರಿಕೆ ಹಾಕಿದ್ದರು. ಇದರಿಂದ ಯುವಕನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಈ ಕುರಿತಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















