ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಸ್ತೆಗಳಲ್ಲಿ ವೀಲಿಂಗ್ wheeling ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಈ ಘಟನೆಯು ಶಿವಮೊಗ್ಗದ ವಿಮಾನ ನಿಲ್ದಾಣ ರಸ್ತೆಯ ಪುಟ್ಟಪ್ಪ ಕ್ಯಾಂಪ್ ಬಳಿ ನಡೆದಿದೆ. ಇಬ್ಬರು ಯುವಕರು ತಮ್ಮ ಮೊಪೆಡ್ ವಾಹನದಲ್ಲಿ ವೀಲಿಂಗ್ ನಡೆಸಿದ್ದರು. ಈ ದೃಶ್ಯಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಮ್ ಅಥವಾ ಫೇಸ್‌ಬುಕ್‌ನಂತಹ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಸಂಚಾರಿ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆಯೇ, ಬೈಕ್ನ ನಂಬರ್ ಪ್ಲೇಟ್ ಆಧಾರದ ಮೇಲೆ ಯುವಕರನ್ನು ಪತ್ತೆ ಹಚ್ಚಿ ಎಫ್‌ಐಆರ್ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















