ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನೆರೆಹೊರೆಯವರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ಹಾಗೂ ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬರಿಗೆ ಭದ್ರಾವತಿ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಭದ್ರಾವತಿಯ ಹಳೇನಗರ ವ್ಯಾಪ್ತಿಯ 1ನೇ ಕ್ರಾಸ್‌ನ ನಿವಾಸಿ ಅಹ್ಮದ್ ಷರೀಫ್ (34) ಶಿಕ್ಷೆಗೆ ಗುರಿಯಾದ ಆರೋಪಿ.
ಪೊಲೀಸ್ ಪ್ರಕಟಣೆಯ ಪ್ರಕಾರ, ದಿನಾಂಕ 03-10-2021 ರಂದು ನಡೆದಿದ್ದ ಘಟನೆಯಲ್ಲಿ ಆರೋಪಿ ಅಹ್ಮದ್ ಷರೀಫ್ ತನ್ನ ಎದುರು ಮನೆಯಲ್ಲಿ ವಾಸವಿದ್ದ ಮಹಮ್ಮದ್ ಸಾಬ್ ಎಂಬುವವರ ನಿವಾಸಕ್ಕೆ ನುಗ್ಗಿ ಅವರ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಗ್ಗೆ ಅಂದಿನ ಪಿಎಸ್ಐ ಈರೇಶ್ ಚಾರ್ಜ್ಶೀಟ್ ಸಲ್ಲಿಸಿದ್ದರು.
ಕೋರ್ಟ್ನಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು. ವಿಚಾರಣೆ ಮುಗಿದು ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ತೀರ್ಪನ್ನು ಪ್ರಕಟಿಸಿದ್ದಾರೆ. ಅಪರಾಧಿ ಅಹ್ಮದ್ ಷರೀಫ್‌ಗೆ 01 ವರ್ಷಗಳ ಕಾಲ ಸಾಧಾ ಕಾರಾವಾಸದ ಜೈಲು ಶಿಕ್ಷೆ ಹಾಗೂ 2000 ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















