ಕಲ್ಪ ಮೀಡಿಯಾ ಹೌಸ್ | ರಿಪ್ಪನ್ ಪೇಟೆ |
ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ವೇಳೆಯಲ್ಲಿ ಕಂಬಂದಿದ ಕೆಳಗೆ ಬಿದ್ದು ಕಾರ್ಮಿಕ ಸಾವು ಕಂಡಿರುವ ಘಟನೆ ಘಟನೆ ನಡೆದಿದೆ.
ಮೈಸೂರು ಮೂಲದ ವಿಜಯ್ (30) ಯುವಕ ಎಂದು ಗುರುತಿಸಲಾಗಿದೆ.
ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಾಮಗಾರಿ ನಿರ್ವಹಿಸುತಿದ್ದ ವೇಳೆಯಲ್ಲಿ ಕಾರ್ಮಿಕನೊಬ್ಬ ಲೈಟ್ ಕಂಬವೇರಿದ ಸಂದರ್ಭದಲ್ಲಿ ವಿದ್ಯುತ್ ಕಂಬ ಏಕಾಏಕಿ ತುಂಡಾದ ಹಿನ್ನೆಲೆಯಲ್ಲಿ ಕಾರ್ಮಿಕ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು.
ಕೂಡಲೇ ಆತನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು. ಆದರೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















