ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೇಸ್ ಯು.ಎಂ.ಪಿ.ಯು. ಕಾಲೇಜಿನಲ್ಲಿ ಈ ಬಾರಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ Second PU Result 99.42 ಆಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲೇ 4ನೇ ಸ್ಥಾನ ಪಡೆದಿದೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರಯತ್ನದಿಂದ ಉತ್ತಮ ಫಲಿತಾಂಶ ಬಂದಿದೆ. ಹೆಚ್ಚಿನ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಅವರು ಸಲ್ಲಿಸಿದರು.
ಮಹೀನ್ ಖಾನಮ್ ಅಫ್ರಿದಿ 600ಕ್ಕೆ 596 ಅಂಕ ಪಡೆದಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾಳೆ. ಸಾದ್ವಿ ಎಂ.ಎಸ್. 594 ಅಂಕ ಪಡೆದು ಜಿಲ್ಲೆಗೆ ತೃತೀಯ ಹಾಗೂ ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾಳೆ. ಅಂಕಿತ್ ಯು.ವಿ. 589, ಧೃತಿ ಹೆಚ್. ಭಟ್ 589, ಸಿಂಚನ ಪಿ.ಓ. 589 ಅಂಕಗಳಿಸಿ ಕಾಲೇಜಿಗೆ 3ನೇ ಸ್ಥಾನ ಪಡೆದಿದ್ದಾರೆ ಎಂದರು.
ಹೆಚ್ಚಿನ ಅಂಕಗಳಿಸಿದ ಮಹೀನ್ ಖಾನಮ್ ಅಫ್ರಿದಿ ಮಾತನಾಡಿ, ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಎಲ್ಲಾ ಉಪನ್ಯಾಸಕರ ಉತ್ತಮ ಮಾರ್ಗದರ್ಶನ ಸಲಹೆ ಮತ್ತು ನಮಗೆ ಯಾವುದೇ ಅನುಮಾನವಿದ್ದರೂ ವಿಶೇಷವಾಗಿ ಕರೆದು ಮಾರ್ಗದರ್ಶನ ನೀಡಿದ್ದರಿಂದ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರೊ.ವಿಶ್ವನಾಥಯ್ಯ ಹಾಗೂ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
