ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು, ದಾರ್ಶನಿಕ ಸಮಾಜ ಸುಧಾರಕ, ಭಾರತೀಯ ಸಂವಿಧಾನದ ಮುಖ್ಯ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳು ಅಪಾರವಾಗಿವೆ ಎಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರವೀಂದ್ರ ಕೆ ಸಿ ಹೇಳಿದರು.
ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ Kumadvathi First Grade College ಡಾ. ಬಿ.ಆರ್. ಅಂಬೇಡ್ಕರ್ Dr. B R Ambedkar ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕವಾಗಿ ಹಿಂದುಳಿದ ಸಮುದಾಯದಲ್ಲಿ ಜನಿಸಿದ ಡಾ. ಅಂಬೇಡ್ಕರ್ ಭಾರತದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಲು ಅಪಾರ ಸವಾಲುಗಳನ್ನು ಎದುರಿಸಿದ ಅವರು ಸಾಮಾಜಿಕ ತಾರತಮ್ಯವನ್ನು ನಿರ್ಮೂಲನೆ ಮಾಡಲು, ದಲಿತ ಹಕ್ಕುಗಳಿಗಾಗಿ ಪ್ರತಿಪಾದಿಸಲು ಮತ್ತು ಸಮಗ್ರ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿ ಚೌಕಟ್ಟನ್ನು ನಿರ್ಮಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದರು.
ಸಹಾಯಕ ಪ್ರಾಧ್ಯಾಪಕರಾದ ಕೋಟೋಜಿರಾವ್ ಮಾತನಾಡಿ, “ಡಾ. ಬಿ ಆರ್ ಅಂಬೇಡ್ಕರ್ ಭಾರತವನ್ನು ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಎಲ್ಲರನ್ನೂ ಒಳಗೊಂಡ ರಾಷ್ಟ್ರವಾಗಿ ಕಲ್ಪಿಸಿಕೊಂಡರು, ಅದು ಎಲ್ಲರಿಗೂ ನ್ಯಾಯ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಖಾತ್ರಿಪಡಿಸುತ್ತದೆ. ಅಸ್ಪೃಶ್ಯತಾ ನಿರ್ಮೂಲನೆ, ದೇವಾಲಯ ಪ್ರವೇಶ ಚಳುವಳಿಗಳು, ಶೈಕ್ಷಣಿಕ ಉಪಕ್ರಮಗಳ ಬಗ್ಗೆ ಅವರ ದೃಷ್ಟಿಕೋನ ಇಂದಿಗೂ ಮಾದರಿಯಾಗಿದೆ” ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















