ಕಲ್ಪ ಮೀಡಿಯಾ ಹೌಸ್ | ಕುಂಸಿ |
ಹುಟ್ಟುಹಬ್ಬದ ಔತಣ ಕೂಟದಲ್ಲಿ ಭಾಗವಹಿಸಿದ್ದ ಯುವಕನ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮವಾಗಿ ಸಾವನ್ನಪ್ಪಿರುವ ಘಟನೆ ಚೆನ್ನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರ ಬಳಿ ನಾನ್ ವೆಜ್ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿನ್, ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ವಾಪಸ್ಸಾಗಿದ್ದರು. ಶುಕ್ರವಾರ ಮುಂಜಾನೆ ಕಾಮಗಾರಿ ಮುಂದುವರಿಸಲು ಕೆಲಸಗಾರರು ಕಟ್ಟಡದ ಬಳಿ ಬಂದಾಗ, ಸಚಿನ್ ಅಲ್ಲಿ ಶವವಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















