ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲು ನಿಲ್ದಾಣನಲ್ಲಿ Hubballi railway station ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ DRM Bela Meena ಅವರ ನೇತೃತ್ವದಲ್ಲಿ ಶುಕ್ರವಾರ ಫೋರ್ಟ್ರೆಸ್ ಚೆಕ್ ನಡೆಸಲಾಯಿತು.
ಈ ವಿಶೇಷ ಪರಿಶೀಲನಾ ಕಾರ್ಯಾಚರಣೆಯ ವೇಳೆ ಪ್ರಯಾಣಿಕರಿಗೆ ಪ್ಲಾಟ್‌ಫಾರ್ಮ್ ಟಿಕೆಟ್ ಪಡೆದು ನಿಲ್ದಾಣ ಪ್ರವೇಶಿಸುವುದು, ಮಾನ್ಯತೆಯ ಪಾಸ್ ಅಥವಾ ಟಿಕೆಟ್ ಹೊಂದಿ ಪ್ರಯಾಣಿಸುವುದು, ಪ್ರಯಾಣಿಕರ ಸೌಲಭ್ಯಗಳ ಸರಿಯಾದ ಬಳಕೆ, ಸುರಕ್ಷತೆ ಹಾಗೂ ನಿಲ್ದಾಣ ಪರಿಸರವನ್ನು ಸ್ವಚ್ಛವಾಗಿಡುವ ಕುರಿತು ಜಾಗೃತಿ ಮೂಡಿಸಲಾಯಿತು. ಜೊತೆಗೆ ಅನಧಿಕೃತ ಪ್ರಯಾಣವನ್ನು ತಡೆಗಟ್ಟುವತ್ತ ವಿಶೇಷ ಗಮನ ಹರಿಸಲಾಯಿತು
ಈ ಸಂದರ್ಭದಲ್ಲಿ, ಪ್ರಯಾಣಿಕರಿಗೆ ಗುಣಮಟ್ಟದ ಆಹಾರವನ್ನು ಒದಗಿಸುವುದು ಹಾಗೂ ದೂರುಗಳಿಗೆ ಕಾರಣವಾಗುವ ಯಾವುದೇ ರೀತಿಯ ನಡವಳಿಕೆಯನ್ನು ತಪ್ಪಿಸುವ ಕುರಿತು ಡಿಆರ್‌ಎಂ ಅವರು ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC )ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಜೊತೆಗೆ ಪ್ಯಾಂಟ್ರಿ ಕಾರ್ ಸಿಬ್ಬಂದಿಗೆ ಸ್ವಚ್ಛತೆ ಮತ್ತು ಸೇವಾ ಗುಣಮಟ್ಟವನ್ನು ಕಾಪಾಡುವಂತೆ ಅಗತ್ಯ ಸಲಹೆಗಳನ್ನು ನೀಡಿದರು.
ಹಿರಿಯ ಅಧಿಕಾರಿಗಳು ಪರಿಶೀಲನೆ ವೇಳೆ ಉಪಸ್ಥಿತರಿದ್ದು, ಕಾರ್ಯಾಚರಣೆಯ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಿದರು ಹಾಗೂ ಟಿಕೆಟ್ ಪರಿಶೀಲನಾ ಸಿಬ್ಬಂದಿ, ಸ್ಕೌಟ್ಸ್ & ಗೈಡ್ಸ್ ಹಾಗೂ ಆರ್‌ಪಿಎಫ್ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















