ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರು ಬಳಿ ಕ್ರೆಟಾ ಕಾರ್ ಮತ್ತು ಒಮ್ನಿ ವಾಹನದ ನಡುವೆ ಮಂಗಳವಾರ ನಡೆದ ಮುಖಾಮುಖಿ ಡಿಕ್ಕಿಯಿಂದ ಒಮ್ನಿ ಚಾಲಕನ ಕಾಲು ತುಂಡಾಗಿದೆ ಎನ್ನಲಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ತೆರಳಿ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕರೆದೊಯ್ದು ಆಯನೂರು ಆಸ್ಪತ್ರೆಗೆ ದಾಖಲಿಸಿದರು. ಅಪಘಾತದಿಂದಾಗಿ ಸಾಗರ ರಸ್ತೆಯಲ್ಲಿ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು.
ಪೊಲೀಸರು ಸ್ಥಳದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಿ ಪರಿಸ್ಥಿತಿ ಸಹಜ ಸ್ಥಿತಿಗೆ ತಂದರು. ಅಪಘಾತದಲ್ಲಿ ಒಮ್ನಿ ಸಂಪೂರ್ಣ ಜಖಂ ಆಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















