ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಿಯುಸಿ ಫಲಿತಾಂಶದಂತೆ PUC Result ಎಸ್‍ಎಸ್‍ಎಲ್‍ಸಿ ಫಲಿತಾಂಶವೂ SSLC Result ಕೂಡ ಈ ಬಾರಿ ಉತ್ತಮ ಫಲಿತಾಂಶ ಬರಲಿದ್ದು, ಸಾಕಷ್ಟು ಸುಧಾರಣೆಯಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ Minister Madhu Bangarappa ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಫಲಿತಾಂಶ ಬರಬೇಕಾಗಿತ್ತು. ಆದರೆ ಹಿಂದಿ ಭಾಷೆಗೆ ಅಂಕವನ್ನು ಕೊಡಬೇಕು ಎಂಬ ಹೈಕೋರ್ಟ್ ತೀರ್ಪಿನಂತೆ ಈ ಬಾರಿ ಅಂಕಗಳನ್ನು ನೀಡಲಾಗುತ್ತದೆ. ಆದರೂ ಕೂಡ ಗೊಂದಲಬೇಡ. ಫಲಿತಾಂಶ ಆದಷ್ಟುಬೇಗ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಒತ್ತಡವನ್ನು ತಪ್ಪಿಸುವ ಉದ್ದೇಶದಿಂದ ತೃತೀಯ ಭಾಷೆಗೆ ಕೇವಲ ಗ್ರೇಡ್ ಕೊಡಬೇಕೆಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಹೈಕೋರ್ಟ್ High Court ಈ ವರ್ಷ ನೀವು ಅಂಕವನ್ನೇ ನೀಡಿ, ಮುಂದಿನ ಬಾರಿ ಏನಾದರೂ ಮಾಡಿಕೊಳ್ಳಿ ಎಂದು ಹೇಳಿದ್ದರಿಂದ ಹಿಂದಿ ಅಥವಾ ತೃತೀಯ ಭಾಷೆಗೂ ಕೂಡ ಅಂಕವನ್ನು ನೀಡಲಾಗುತ್ತದೆ. ಆದರೆ ಮುಂದಿನ ವರ್ಷಕ್ಕೆ ಮತ್ತೋಮ್ಮೆ ನ್ಯಾಯಾಲಯದ ಮೇಟ್ಟಿಲೇರಿ ಗ್ರೇಡ್ ಪದ್ಧತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.
ಪಿಯುಸಿಯಲ್ಲೂ ಕೂಡ ಉತ್ತಮ ಫಲಿತಾಂಶ ಬಂದಿದ್ದು, ಸಾಕಷ್ಟು ಸುಧಾರಣೆಯಾಗಿದೆ. ಕಳೆದ ಸಾರಿ 30ಸಾವಿರ ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲೂ ಫೇಲಾಗಿದ್ದರು. ಆದರೆ ಈ ಬಾರಿ ಕೇವಲ 1777 ವಿದ್ಯಾರ್ಥಿಗಳು ಮಾತ್ರ ಎಲ್ಲಾ ವಿಷಯದಲ್ಲಿ ಫೇಲಾಗಿದ್ದಾರೆ. ಇದು ಉತ್ತಮವಾದ ಫಲಿತಾಂಶವಾಗಿದೆ. ನಾವು ಎಸ್‍ಎಸ್‍ಎಲ್‍ಸಿಗೆ ಶೇಕಡವಾರು ಕಡಿಮೆ ಮಾಡಿದ್ದರೂ ಕೂಡ ವಿದ್ಯಾರ್ಥಿಗಳು ಅತೀ ಹೆಚ್ಚು ಅಂಕವನ್ನು ಪಡೆದಿದ್ದಾರೆ. ತೃತೀಯದರ್ಜೆಯಲ್ಲಿ ಪಾಸಾದ ಮಕ್ಕಳ ಸಂಖ್ಯೆ ತುಂಬಾ ಕಡಿಮೆ ಇದೆ. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಕರು, ಪೋಷಕರು ಮತ್ತು ಶಿಕ್ಷಣದಲ್ಲಿನ ಬದಲಾವಣೆಗಳು ಕಾರಣವಾಗಿವೆ ಎಂದರು.
ಬೇಸಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ರಾಜ್ಯದಲ್ಲಿಯೇ ತಲೆದೋರಬಹುದಾಗಿದೆ. ಈಗಾಗಲೇ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆಕೂಡ ಮಾಡಲಾಗಿದೆ. ಕ್ಯಾಬಿನೆಟ್ ಮೀಟಿಂಗ್‍ನಲ್ಲಿಯೂ ಕೂಡ ಕುಡಿಯುವ ನೀರಿನ ಬಗ್ಗೆ ಚರ್ಚಿಸಿದ್ದೇವೆ. ಯಾವುದೇ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳು ಈಗಾಗಲೇ ಸೂಚಿಸಲಾಗಿದೆ. ನಾನೂ ಕೂಡ ಶಿವಮೊಗ್ಗದ ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆಮಾಡಿದ್ದೇನೆ. ಶಿವಮೊಗ್ಗ ನಗರದಲ್ಲಿ ಸುಮಾರು 20 ಕಡೆ ನೀರಿನ ಸಮಸ್ಯೆ ತಲೆದೋರಬಹುದು ಎಂದು ಸೂಚಿಸಲಾಗಿದೆ. ಹಾಗೆಯೇ ಸೊರಬ ಸೇರಿದಂತೆ ಇತರೆ ತಾಲ್ಲೂಕುಗಳಲ್ಲಿಯೂ ಕೂಡ ಕುಡಿಯುವ ನೀರಿನ ಬಗ್ಗೆ ತೊಂದರೆಯಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಟ್ಯಾಂಕ್ ಮೂಲಕ ನೀರು ಸರಬರಾಜು, ಕೆಲವು ಕೊಳವೆಬಾವಿಗಳ ವಶಪಡಿಸಿಕೊಳ್ಳುವುದೂ ಸೇರಿದಂತೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಇತ್ತೀಚೆಗೆ ಸುರಿದ ಬಾರೀ ಗಾಳಿ, ಮಳೆಯಿಂದ ಅನೇಕ ಕಡೆ ಹಾನಿಯಾಗಿದೆ. ಕೆಲವು ಕಡೆ ಮನೆಯ ಹೆಂಚುಗಳು ಹಾರಿಹೋಗಿವೆ. ಗೋಡೆಗಳು ಬಿದ್ದಿವೆ. ಆಸ್ತಿ-ಪಾಸ್ತಿ ನಷ್ಟವಾಗಿದೆ. ಆದರೆ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಅನೇಕ ಕಡೆ ಮರಗಳು ಬಿದ್ದಿವೆ. ಓರ್ವ ವೃದ್ಧರಿಗೆ ಮಾತ್ರ ಗಾಯವಾಗಿದ್ದು ಅವರೂ ಕೂಡ ಕ್ಷೇಮವಾಗಿದ್ದಾರೆ. ಈಗಾಗಲೇ ಒಂದು ಸುತ್ತು ವೀಕ್ಷಣೆ ಮಾಡಿ ಬಂದಿದ್ದೇನೆ. ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಳೆ ಹಾನಿಯ ಬಗ್ಗೆ ವರದಿ ಬಂದ ಮೇಲೆ ಪರಿಹಾರಕ್ಕಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















