ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೇಸಿಗೆಯ ರಜೆಯ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು South Western Railway ಯಶವಂತಪುರ ಮತ್ತು ಖರಗ್ಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲಿದೆ.
ರೈಲು ಸಂಖ್ಯೆ 06245 ಯಶವಂತಪುರದಿಂದ ಏಪ್ರಿಲ್ 24, 2026ರ ಶುಕ್ರವಾರ ರಾತ್ರಿ 11:15ಕ್ಕೆ ಹೊರಟು, ಭಾನುವಾರ ಬೆಳಿಗ್ಗೆ 09:30ಕ್ಕೆ ಖರಗ್ಪುರವನ್ನು ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06246 ಖರಗ್ಪುರದಿಂದ ಏಪ್ರಿಲ್ 26, 2026ರ ಭಾನುವಾರ ಮಧ್ಯಾಹ್ನ 12:00 ಗಂಟೆಗೆ ಹೊರಟು, ಸೋಮವಾರ ರಾತ್ರಿ 10:30ಕ್ಕೆ ಯಶವಂತಪುರಕ್ಕೆ ಬಂದು ಸೇರಲಿದೆ.
ಈ ವಿಶೇಷ ರೈಲು ಸಂಚಾರದ ಅವಧಿಯಲ್ಲಿ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಧೋಣ, ನಂದ್ಯಾಲ, ಮಾರ್ಕಾಪುರ ರೋಡ್, ನರಸರಾವ್ ಪೇಟೆ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್ ಮತ್ತು ಬಾಲೇಶ್ವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಒಟ್ಟು 20 ಬೋಗಿಗಳನ್ನು ಹೊಂದಿರುವ ಈ ರೈಲಿನಲ್ಲಿ 3 ಎಸಿ 3-ಟೈರ್ ಬೋಗಿಗಳು, 12 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದರ್ಜೆಯ ಬೋಗಿಗಳು ಹಾಗೂ ದಿವ್ಯಾಂಗ ಸ್ನೇಹಿ ಸೌಲಭ್ಯವುಳ್ಳ 2 ಎರಡನೇ ದರ್ಜೆಯ ಲಗೇಜ್ ಮತ್ತು ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















