ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ #CookerBombBlast ಸ್ಪೋಟದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್’ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ #NIA ಎನ್’ಐಎ ವಿಶೇಷ ನ್ಯಾಯಾಲಯ, ಆತನಿಗೆ 10 ವರ್ಷದ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಈ ಕುರಿತಂತೆ ಇಂದು ತೀರ್ಪು ನೀಡಿರುವ ನ್ಯಾಯಾಲಯ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾರಿಕ್’ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
Also Read>> ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು
2022ರ ನವೆಂಬರ್ 19ರಂದು ಮಂಗಳೂರಿನ #Mangalore ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು.
ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ ನ್’ಐಎ ತನಿಖೆಗೆ ವಹಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್’ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.
ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















