ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಪೊಲೀಸ್ Shivamogga District Police ವತಿಯಿಂದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಡ್ರೋಣ್ ಕ್ಯಾಮೆರಾ Drone Camera ಮುಖಾಂತರ ಕಣ್ಗಾವಲು ಇಟ್ಟಿದೆ.
ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ Illegal activities ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕ್ರಮಕೈಗೊಂಡಿದ್ದು, ಡ್ರೋಣ್ ಹಾರಿಸಿ ಭದ್ರಾವತಿಯ ಹೊರ ವಲಯದ ಕೂಡ್ಲಿಗೆರೆ ಅರಣ್ಯ ಪ್ರದೇಶದ ಚಾನೆಲ್ ಏರಿಯ ಹತ್ತಿರ ಜನರು ಗುಂಪು ಕಟ್ಟಿಕೊಂಡು ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದ್ದು, ಜೂಜಾಟದಲ್ಲಿ ತೊಡಗಿದ್ದ 19 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಸ್ಪಿ ನಿಖಿಲ್ SP Nikhil ಅವರ ಖಡಕ್ ಸೂಚನೆ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೋಲಿಸ್ ನಿರೀಕ್ಷಕರ ನೇತೃತ್ವದ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಮಲ್ಲಾಪುರ, ಕಲ್ಲಿಹಾಳ್ ತಟ್ಟೆಹಳ್ಳಿ ಭಾಗದಲ್ಲಿ ಹಗಲು ರಾತ್ರಿ ತೂರಬಿಲ್ಲೆ ಆಟ ನಡೆಯುತ್ತದೆ ಎಂಬುದರ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಡ್ರೋಣ್ ಹಾರಿಸಿ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















