No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ: ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

kalpa News by kalpa News
April 29, 2026
in ಶಿವಮೊಗ್ಗ
0
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳೆಹೊನ್ನೂರು ಹಾಗೂ ಕೂಡ್ಲಿಗೆರೆ ಹೋಬಳಿಯ ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಘಟನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣ ಹೆಚ್ಚು ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದು, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಏ.26ರಂದು ಈ ಎರಡೂ ಹೋಬಳಿ ಗ್ರಾಮಗಳಲ್ಲಿ ಹಿಂದೆಂದೂ ಕಂಡರಿಯದ ಆಲಿಕಲ್ಲು ಮಳೆ, ಬಿರುಗಾಳಿಯಿಂದ ಸುಮಾರು ಮನೆಗಳು ಹಾನಿಯಾಗಿದ್ದು, ವಾಸ ಮಾಡಲಿಕ್ಕೆ ಆಗದಂತಾಗಿದೆ. ನಿರಾಶ್ರಿತರಿಗೆ ಗಂಜಿಕೇಂದ್ರಗಳನ್ನು ತೆರೆಯಲಾಗಿದೆ. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಮರಗಳನ್ನು ಬೆಳೆಯಲಾಗಿದ್ದು, ಒಂದು ಎಕರೆಯಲ್ಲಿರುವ ಅಡಿಕೆ ಮರಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮರಗಳು ನೆಲಕ್ಕುರುಳಿ ರೈತರು ಆತಂಕಕ್ಕೀಡಗಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಜೊತೆಗೆ ತೆಂಗಿನಮರಗಳು ಸಹ ನೆಲಕ್ಕುರುಳಿವೆ. ವರ್ಷಗಟ್ಟಲೆ ಬೆಳೆಸಿದ ಮರಗಳು ಒಂದೇ ರಾತ್ರಿಯಲ್ಲಿ ನೆಲಕ್ಕುರುಳಿರುವುದು ಸಾವಿರಾರು ರೈತರ ಜೀವನಾಧಾರಿತವೇ ಕಿತ್ತುಹೋಗಿದೆ. ರೈತನ ಬೆವರಿನ ಫಸಲು ನೀರಿನಲ್ಲಿ ಕೊಚ್ಚಿ ಹೋಗಿದೆ. ಅಡಿಕೆ ಒಂದು ಬೆಳೆ ಅಲ್ಲ, ಮಲೆನಾಡಿನ ಜೀವನಾಡಿ. ಆದ್ದರಿಂದ ಈ ಘಟನೆ ಬಗ್ಗೆ ಅಧಿಕಾರಿಗಳಿಂದ ನೈಜವಾದ ಸರ್ವೆ ಮಾಡಿಸಿ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಮಾತನಾಡಿ, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ನೀಡಿ ಮಾರ್ಗಸೂಚಿ ಪ್ರಕಾರ ಪರಿಹಾರದ ಮೊತ್ತ 1ಹೆಕ್ಟೇರ್ ಒಣಭೂಮಿ ಬೆಳೆಗೆ 8,500 ರೂ., ನೀರಾವರಿ ಬೆಳೆಗೆ 17 ಸಾವಿರ ರೂ., ಬಹುವಾರ್ಷಿಕ ತೋಟದ ಬೆಳೆಗಳಿಗೆ 22 ಸಾವಿರ ರೂ., ಇದೆ. ಈ ಪರಿಹಾರವನ್ನು  ಶೇ.33ಕ್ಕಿಂತ ಹೆಚ್ಚು ಹಾನಿಯಾಗಿದ್ದಲ್ಲಿ ಮಾತ್ರ ಕೊಡಬಹುದು. 1 ಹೆಕ್ಟೇರ್‍ನಲ್ಲಿ 2.5 ಎಕರೆ ಅಡಿಕೆ ಬೆಳೆಗೆ 22 ಸಾವಿರ ರೂ., 1 ಎಕರೆಗೆ 9ಸಾವಿರದಂತೆ 548 ಗಿಡಗಳಿಗೆ ಲೆಕ್ಕ ಹಾಕಿದಾಗ ಒಂದು ಮರಕ್ಕೆ 16 ರೂ. ಬರುತ್ತದೆ. ಈ 16 ರೂ.ನಿಂದ 1 ಅಡಿಕೆ ಮರವನ್ನು ತೋಟದಿಂದ ಕಡಿದು ಹೊರಗೆ ಸಾಗಿಸಲಿಕ್ಕು ಸಹ ಸಾಧ್ಯವಿಲ್ಲ. ಆದ್ದರಿಂದ ವಿಪತ್ತು ಪರಿಹಾರ ನಿಧಿ ಹೆಚ್ಚಿಸಲು  ಹಿಂದಿನಿಂದಲೂ ರೈತ ಸಂಘ ಪಾದಯಾತ್ರೆ, ಚಳವಳಿಗಳನ್ನು ಮಾಡಿ ಒತ್ತಾಯಿಸುತ್ತಾ ಬಂದಿದೆ.  ಇಲ್ಲಿಯವರೆಗೂ ಹೆಚ್ಚಳ ಮಾಡಿಲ್ಲ. ಈಗಲಾದರೂ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು.
ಅಡಿಕೆ ಬೆಳೆ ಬೆಳೆಯಲು ಅಡಿಕೆ ಸಸಿ ನೆಟ್ಟು ಸಾವಿರಾರು ರೂ. ಖರ್ಚು ಮಾಡಿ ಫಸಲು ಬರಲು ಕನಿಷ್ಠ 8 ವರ್ಷ ಕಾಯಬೇಕು. ಈ ರೀತಿ ಬೆಳೆಸಿದ ಅಡಿಕೆ ಮರಗಳು ಸಂಪೂರ್ಣ ನೆಲಕ್ಕುರುಳಿದಾಗ ಲಕ್ಷಾಂತರ ರೂ. ನಷ್ಟವಾಗುತ್ತದೆ. ಆದ್ದರಿಂದ ಮಳೆಯಿಂದ ಆದ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮೊತ್ತವನ್ನು 20 ಪಟ್ಟು ಹೆಚ್ಚಿಸಬೇಕು. ಎಲ್ಲಾ ರೈತರಿಗೂ ಎಕರೆಗೆ ಕನಿಷ್ಟ 50 ಸಾವಿರ ರೂ. ಪರಿಹಾರ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತೀ ಹಳ್ಳಿಗೂ ಭೇಟಿ ನೀಡಿ ನೈಜ ಸಮೀಕ್ಷೆ ಮಾಡಿಸಬೇಕು. ಪೇಪರ್ ಕಿರಿಕಿರಿ ಇಲ್ಲದೆ ಬೆಳೆ ವಿಮೆ ತಕ್ಷಣ ಬಿಡುಗಡೆ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು. ಬಡ್ಡಿ ರಹಿತವಾಗಿ ಹೊಸ ಸಾಲ ನೀಡಬೇಕು. ಹಾನಿಗೊಳಗಾದ ಮನೆಗಳಿಗೆ ಹೊಸದಾಗಿ ಮನೆಕಟ್ಟಿಕೊಳ್ಳಲು 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ರಾಜ್ಯ ಮಹಿಳಾ ಸಂಚಾಲಕಿ ಭಾಗ್ಯ ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಟಿ.ಎಂ.ಚಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಬಿ.ಜಗದೀಶ್, ಪ್ರಮುಖರಾದ ಸಿ.ಬಿ.ಹನುಮಂತಪ್ಪ, ಡಿ.ಎನ್.ಪಂಚಾಕ್ಷರಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

Next Post

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

kalpa News

kalpa News

Next Post
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL