ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಮಾನ ನಿಲ್ದಾಣವನ್ನು Shivamogga Airport ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ರಾಜ್ಯ ಸರ್ಕಾರ ಚರ್ಚೆಗೆ ದೆಹಲಿಗೆ ಕಳುಹಿಸಿತ್ತು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಇಂಡಿಗೋ ವಿಮಾನ ಹಾರಾಟ ಸ್ಥಗಿತಗೊಳ್ಳಲಿದೆ. ಇಂಡಿಗೋ ವಿಮಾನ Indigo Flight ಸೇವೆ ಸ್ಥಗಿತ ತಾತ್ಕಲಿಕವಾದದ್ದು. ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರೊಂದಿಗೆ ಮಾತುಕತೆ ನಡೆಸಿದೆ. ಅವರು ಕೂಡ ವಿಮಾನ ಸೇವೆಗಳ ಪುನಾರಂಭಕ್ಕೆ ಪರ್ಯಾಯ ಮಾರ್ಗ ಹುಡುಕುವ ಭರವಸೆ ನೀಡಿದ್ದಾರೆ ಎಂದರು ತಿಳಿಸಿದರು.
ರಾಜಧಾನಿಗೆ ವಿಮಾನಯಾನ ಸೇವೆ ನೀಡುವುದು ಉಡಾನ್ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಆದ್ದರಿಂದ ಯಡಿಯೂರಪ್ಪ ಅವರ ಸರ್ಕಾರ ಶಿವಮೊಗ್ಗ – ಬೆಂಗಳೂರು ವಿಮಾನಕ್ಕೆ ರಾಜ್ಯ ಸರ್ಕಾರದ ವಿಜಿಎಫ್ ಯೋಜನೆ ಮೂಲಕ ಪ್ರತಿ ಟಿಕೆಟ್‌ಗೆ ರೂ 500 ಸಹಾಯಧನ ನೀಡುತ್ತಿತ್ತು. ಈ ಯೋಜನೆ ಮುಕ್ತಾಯವಾಗಿ ಒಂದು ವರ್ಷವಾಗಿದೆ. ಯೋಜನೆ ಮುಂದುವರೆಸುವ ಕುರಿತು ಮನವಿ ಮಾಡಿದರು ಈ ತನಕ ಪ್ರಯೋಜನವಾಗಿಲ್ಲ ಎಂದು ಸಂಸದ ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು
ನೈಟ್ ಲ್ಯಾಂಡಿಂಗ್ ಆರಂಭವಾದರೆ ವಿಮಾನ ನಿಲ್ದಾಣಕ್ಕೆ ಮತ್ತಷ್ಟು ಅನುಕೂಲ ಆಗಲಿದೆ. ಅದರೆ ಕಾಮಗಾರಿ ವಿಳಂಬವಾಯಿತು. ನೈಟ್ ಲ್ಯಾಂಡಿಂಗ್ ಟೆಂಡರ್‌ಗೆ ಮೂರು ತಿಂಗಳಾಯಿತು. ಕಾಮಗಾರಿ ಆರಂಭಕ್ಕೆ ಆರು ತಿಂಗಳಾಯಿತು. ಇಷ್ಟು ಹೊತ್ತಿಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಈತನಕ ಆಗಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















