ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 01 ಮತ್ತು ಮೇ 02 ರಂದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಮೆಸ್ಕಾಂ ಪ್ರಕಟಣೆ ನೀಡಿದ್ದು, ತಾವರೆಚಟ್ನಹಳ್ಳಿ ವಿದ್ಯುತ್ ಕೇಂದ್ರದಲ್ಲಿ ಭೂಗತ ಕೇಬಲ್ ಅಳವಡಿಸುವ ಮಹತ್ವದ ತಾಂತ್ರಿಕ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 9:00 ಗಂಟೆಯಿAದ ಸಂಜೆ 6:00 ಗಂಟೆಯವರೆಗೆ ಸುಮಾರು 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಲಾಗಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಅಶ್ವತ್ನಗರ, ಕೀರ್ತಿನಗರ, ದೇವಂಗಿ ಹಂತಗಳು, ಬಸವೇಶ್ವರನಗರ, ಡಾಲರ್ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಲೇಔಟ್, ಪೆಬಲ್ಸ್ ಅಪಾರ್ಟ್ಮೆಂಟ್, ಶಾಂತಿನಗರ ಹಾಗೂ ರಾಗಿಗುಡ್ಡ ಭಾಗಗಳಲ್ಲಿ ಪವರ್ ಕಟ್ ಇರಲಿದೆ.
ಇದಲ್ಲದೆ, ಜೆಎನ್ಸಿಸಿ ಇಂಜಿನಿಯರಿAಗ್ ಕಾಲೇಜ್, ಕೃಷಿ ಕಾಲೇಜ್, ಬೊಮ್ಮನಕಟ್ಟೆ ಎ ಇಂದ ಎಚ್ ಬ್ಲಾಕ್, ಹಳೆ ಬೊಮ್ಮನಕಟ್ಟೆ, ಸಾನ್ವಿ ಲೇಔಟ್, ಅಕ್ಷರನಗರ, ಪೆರ್ಫೆಕ್ಟ್ ಅಲಾಯ್ಸ್ ಹಾಗೂ ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೂ ವಿದ್ಯುತ್ ಪೂರೈಕೆ ಇರುವುದಿಲ್ಲ.
ಗ್ರಾಮೀಣ ಭಾಗಗಳಾದ ಬಿಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ ಸೇರಿದಂತೆ ಸುತ್ತಮುತ್ತಲಿನ ಜಲ್ಲಿ ಕ್ರಷರ್’ಗಳು ಮತ್ತು ಪೆಟ್ರೋಲ್ ಬಂಕ್ಗಳಲ್ಲೂ ಎರಡು ದಿನಗಳ ಕಾಲ ವಿದ್ಯುತ್ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ.
ಮೇ 1ರಂದು ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ
ಇನ್ನು, ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -2ರ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಹೊಸಹಳ್ಳಿ, ಲಕ್ಷ್ಮೀಪುರ, ಮೈಲಾರಪ್ಪ ಕ್ಯಾಪ್, ವೀರಾಪುರ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಈಚಲವಾಡಿ, ಬಸಾಪುರ ಶಾರದಾ ಕಾಲೋನಿ, ಶರಾವತಿನಗರ, ಐಹೊಳೆ ರಸ್ತೆ, ಶ್ರೀನಿವಾಸ ಲೇಔಟ್ ಹಾಗೂ ಸುತ್ತಮುತ್ತಲಿನ ಐಪಿ ಪ್ರದೇಶಗಳಲ್ಲಿ ಮೇ.01 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















