ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಪ್ರಮುಖವಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮುಂಜಾನೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, 8.40ರ ವೇಳೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 104 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಪಕ್ಷ ಒಂದೂ ಕ್ಷೇತ್ರದಲ್ಲಿಯೂ ಸಹ ಮುನ್ನಡೆ ಸಾಧಿಸಿಲ್ಲ.
ಇನ್ನು, ಅಸ್ಸಾಂ ಮತ ಎಣಿಕೆ ವಿಚಾರದಲ್ಲಿ ನೋಡುವುದಾದರೆ, ಬಿಜೆಪಿ 62 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ತಮಿಳುನಾಡಿನಲ್ಲಿ ಡಿಎಂಕೆ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಡಿಎಂಕೆ 21 ಹಾಗೂ ನಟ ವಿಜಯ್ ನೇತೃತ್ವದ ಟಿವಿಕೆ 8 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
Also Read>> ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ
ಕೇರಳ ಮತ ಎಣಿಕೆಯಲ್ಲಿ ಯುಡಿಎಫ್ 54, ಎಲ್’ಡಿಎಫ್ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್’ಡಿಎ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Comments 1