ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕವಾಗಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಕರಿಯಪ್ಪ 1000 ಸಾವಿರ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
Also Read>> ಪಂಚರಾಜ್ಯ ಚುನಾವಣೆ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ಸಮಬಲ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಕಣಕ್ಕೆ ಇಳಿಸಲಾಗಿತ್ತು.
ಇಂದು ಮುಂಜಾನೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಆರಂಭಿಕವಾಗಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಕರಿಯಪ್ಪ ಅವರು ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಸಮರ್ಥ್ ಶಾಮನೂರು ಅವರಿಗೆ ಹಿನ್ನಡೆಯಾಗಿದೆ.
ಇವಿಎಂ ಮತಗಳ ಎಣಿಕೆ ಇನ್ನೂ ಆರಂಭವಾಗಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















