ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎರಡೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಭರವಸೆ ವ್ಯಕ್ತಪಡಿಸಿದ್ದಾರೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಸಿದ್ದ ಎಂದರು.
Also Read>> ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ IT Notice | ತೆರಿಗೆ ಮೇಲ್ಮನವಿಯಲ್ಲಿ ಜಯ
ಬಾಗಲಕೋಟೆಯಲ್ಲಿ ನಮ್ಮ ಪಕ್ಷಕ್ಕೆ ಜಯ ದೊರೆಯುವುದು ನಿಶ್ಚಿತ. ದಾವಣಗೆರೆಯಲ್ಲಿ ಅಂತರ ಕಡಿಮೆಯಾದರೂ ಕಾಂಗ್ರೆಸ್ ಗೆಲ್ಲುತ್ತದೆ ಎಂದರು.
ಇನ್ನು, ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಪಕ್ಷ ಅಷ್ಟಾಗಿಯೇನು ನೆಲೆ ಹೊಂದಿಲ್ಲ. ಆದರೆ, ಕೇರಳದಲ್ಲಿ ನಮ್ಮ ಮೈತ್ರಿ ಗೆಲುವು ಸಾಧಿಸಲಿದೆ. ತಮಿಳುನಾಡಿನಲ್ಲಿ ಅಧಿಕಾರದತ್ತ ದಾಪುಗಾಲಿಡುತ್ತಿರುವ ಟಿವಿಕೆ ಪಕ್ಷ ಹಾಗೂ ಅದರ ಮುಖ್ಯಸ್ಥ ನಟ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























