ಕಲ್ಪ ಮೀಡಿಯಾ ಹೌಸ್ | ಆಗುಂಬೆ |
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿರುವ ಘಟನೆ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 02 ರ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಹಿನ್ನೆಲೆ ಸ್ಥಳೀಯರು ಕೂಡಲೇ 112 ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನವನ್ನು ಪರಿಶೀಲಿಸಿದ್ದಾರೆ. ಪರಿಶೀಲಿಸಿದಾಗ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ತಿಳಿದು ಬಂದಿದೆ.
ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು ವಾಹನವನ್ನು ಟೋಯಿಂಗ್ ಮುಖಾಂತರ ಠಾಣೆಗೆ ತೆಗೆದೊಯ್ದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 













Comments 1