ಕಲ್ಪ ಮೀಡಿಯಾ ಹೌಸ್ | ಕೊಲ್ಕತ್ತಾ |
ಪಶ್ಚಿಮ ಬಂಗಾಳದಲ್ಲಿ West Bengal ಐತಿಹಾಸಿಕ ಜಯ ಭೇರಿ ಬಾರಿಸಿರುವ ಬಿಜೆಪಿ BJP ಮೇ 9ರಂದು ನೂತನ ಸರ್ಕಾರ ಅಸ್ಥಿತ್ವಕ್ಕೆ ಬರುವುದು ಬಹುತೇಕ ನಿಶ್ಚಿತವಾಗಿದೆ.
15 ವರ್ಷಗಳ ಕಾಲ ಟಿಎಂಸಿ ಆಡಳಿತ ಕೊನೆಗೊಂಡಿದ್ದು, ಬಿಜೆಪಿಯ ನೂತನ ಸರ್ಕಾರದ ಮುಖ್ಯಮಂತ್ರಿ ಮೇ 9ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಮೇ 9ರಂದು ರವೀಂದ್ರನಾಥ ಠ್ಯಾಗೋರ್ ಅವರ ಜನ್ಮದಿನವಿದೆ. ಹೀಗಾಗಿ, ಅಂದೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಲು ನಿರ್ಧರಿಸಿದೆ. ಪ್ರಮಾಣ ವಚನ ಸಮಾರಂಭಕ್ಕೆ ಎನ್’ಡಿಎ ಆಡಳಿತವಿರುವ ಎಲ್ಲ ರಾಜ್ಯಗಳ ಸಿಎಂಗಳಿಗೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಬದಿಗೊತ್ತಿ, ಮಮತಾ ಬ್ಯಾನರ್ಜಿಯವರ 15 ವರ್ಷಗಳ ಅಧಿಪತ್ಯವನ್ನು ಕೊನೆಗೊಳಿಸಿದೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಮೊದಲ ಬಾರಿಗೆ ಸರ್ಕಾರ ರಚಿಸಲಿದೆ.
ಆದರೆ, ಯಾವು ಮುಖ್ಯಮಂತ್ರಿಯಾಗಲಿದ್ದಾರೆ, ಮೇ 9ರಂದೇ ಸಂಪುಟ ಸದಸ್ಯರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರಾ ಎಂಬ ಮಾಹಿತಿಗಳು ಲಭ್ಯವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















