ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚನ್ನಸಂದ್ರ ಮತ್ತು ಯಲಹಂಕ ನಿಲ್ದಾಣಗಳ ನಡುವೆ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆಯಾಗಲಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ವಿವರಗಳು ಹೀಗಿವೆ.
Also Read>> ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್
ಮೇ 25 ರಂದು ಹೊರಡುವ 16594 ಸಂಖ್ಯೆಯ ಹಜೂರ್ ಸಾಹಿಬ್ ನಾಂದೇಡ್-ಕೆಎಸ್’ಆರ್ ಬೆಂಗಳೂರು ಡೈಲಿ ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣಕ್ಕೊಳಪಡಲಿದೆ.
ಮೇ 25 ರಂದು ಹೊರಡುವ 06540 ಸಂಖ್ಯೆಯ ಬೀದರ್-ಎಸ್’ಎಂವಿಟಿ ಬೆಂಗಳೂರು ದ್ವಿ-ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಣಕ್ಕೊಳಪಡಲಿದೆ.
ಮೇ 25 ರಂದು ಹೊರಡುವ 16593 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ಡೈಲಿ ಎಕ್ಸ್’ಪ್ರೆಸ್ ರೈಲು ಬೆಂಗಳೂರಿನಿಂದ 75 ನಿಮಿಷ ತಡವಾಗಿ ಹೊರಡಲಿದೆ, ಅಲ್ಲದೆ ಇದೇ ರೈಲು ಕೆಎಸ್’ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ಬದಲಾದ ಮಾರ್ಗವಾಗಿ ಸಂಚರಿಸಲಿದೆ. ಹೀಗಾಗಿ ಈ ರೈಲು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲ್ಲುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















