ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಬಸ್ ಚಾಲನೆ ಮಾಡುತ್ತಿದ್ದಾಗಲೇ ಹೃದಯಸ್ತಂಭನಕ್ಕೆ ಒಳಗಾಗಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ತಾಳತ್ತಮನೆ ಎಂಬಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಿವಕುಮಾರಸ್ವಾಮಿ (52) ಮೃತ ಚಾಲಕ ಎಂದು ಗುರುತಿಸಲಾಗಿದೆ.
ಮುಂಜಾನೆ 4.45ರ ಸುಮಾರಿಗೆ ಬೆಂಗಳೂರಿನಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಟಿದ್ದ ಖಾಸಗಿ ಬಸ್ ಪಕ್ಕದ ಮಣ್ಣಿನ ದಿಬ್ಬಕ್ಕೆ ಒರಗಿ ನಿಂತಿದೆ. ತಾಳತ್ತಮನೆ ಸಮೀಪ ಅವರಿಗೆ ಹೃದಯಸ್ತಂಭನವಾಯಿತು. ಬಸ್‌ನಲ್ಲಿದ್ದ ಇಬ್ಬರು ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ ಎಂದು ವರದಿಯಾಗಿದೆ.
ಹೃದಯಸ್ತಂಭನಕ್ಕೆ ಒಳಗಾಗುತ್ತಿದ್ದಂತೆ ಅವರು ಬಸ್‌ನ ವೇಗವನ್ನು ಕಡಿಮೆ ಮಾಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















