ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡು ರಾಜಕೀಯದಲ್ಲಿ ಹೊಸ ಶಖೆ ಆರಂಭಗೊಂಡಿದ್ದು, ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲ ಹೊಂದಿರುವ ವಿಜಯ್, 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರ ಹಿಡಿದ ಮೊದಲ ನಾಯಕ ಎಂಬ ಇತಿಹಾಸ ಬರೆದಿದ್ದಾರೆ.
ಸದ್ಯ ವಿಜಯ್ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.
ತ್ರಿಷಾ ಅವರು ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ್ದರು. ನೀಲಿ ಬಣ್ಣದ ರೇಷ್ಮೆ ಸೀರೆ ಧರಿಸಿ, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚುತ್ತಿದ್ದ ತ್ರಿಷಾ ಅವರನ್ನು ಕಂಡ ಅಭಿಮಾನಿಗಳು ಹರ್ಷೋದ್ಗಾರ ಮಾಡಿದರು. ಕ್ರೀಡಾಂಗಣಕ್ಕೆ ಪ್ರವೇಶಿಸುತ್ತಿದ್ದಂತೆ ತ್ರಿಷಾ ಅವರು ಅಭಿಮಾನಿಗಳತ್ತ ಕೈ ಬೀಸಿ ಹರ್ಷ ವ್ಯಕ್ತಪಡಿಸಿದರು.
ಈ ಹಿಂದೆ ಚುನಾವಣಾ ಫಲಿತಾಂಶ ಬಂದ ದಿನ ತ್ರಿಷಾ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಇದು ಕೂಡ ಅವರ ರಾಜಕೀಯ ಪ್ರವೇಶದ ಮುನ್ಸೂಚನೆ ಎಂದು ವಿಶ್ಲೇಷಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















