ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮಕುಮಾರ ಸ್ವಾಮೀಜಿಗಳ ನೌಕರರ ಸಂಘ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.75ಕ್ಕಿಂತ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವೀರಶೈವ ಲಿಂಗಾಯತ ನೌಕರರ ಹಾಗೂ ವೀರಶೈವ ಲಿಂಗಾಯತ ಸಮಾಜದವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಜಂಟಿ ಕಾರ್ಯದರ್ಶಿ ಡಾ. ನಟರಾಜ್ ಟಿ.ಎಚ್. ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ವಿದ್ಯಾರ್ಥಿಗಳು 2026ರ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲೇ ಪಾಸಾಗಿರಬೇಕು. ವಿದ್ಯಾರ್ಥಿಯ ಪಾಲಕರು ಶಿವಮೊಗ್ಗ ನಗರದಲ್ಲಿ ವಾಸವಿರಬೇಕು. ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ/ದೃಢೀಕೃತ ಅಂಕಪಟ್ಟಿ/ಶಾಲಾ ವರ್ಗಾವಣೆ ಪತ್ರ-ಪಾಲಕರ ವಾಸಸ್ಥಳದ ಪುರಾವೆ-ಜಾತಿ ಪ್ರಮಾಣಪತ್ರ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು ಎಂದರು.
ಅರ್ಜಿ ಸಲ್ಲಿಸ ಬಯಸುವವರು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 9916278470, 9448231968ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪರಮೇಶ್ವರಪ್ಪ, ಡಾ.ರವಿಕುಮಾರ್, ಹಾಲೇಶಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















