ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಏರಿಕೆ ಮಾಡಿದ್ದು, ಈ ಮೂಲಕ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿದ್ದು, ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.14.25ರಿಂದ ಶೇ.15.75ಕ್ಕೆ ಏರಿಕೆ ಮಾಡಿದೆ. ಈ ಮೂಲಕ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ.
Also Read>> ಪೆಟ್ರೋಲ್ ಬಂಕ್’ಗಳಿಗೆ ಹೊಸ ಕಟ್ಟುನಿಟ್ಟಿನ ನಿಯಮ ಜಾರಿ | ಉಲ್ಲಂಘಿಸಿದ್ರೆ ಕಠಿಣ ಕ್ರಮ
ಪ್ರೀತಿಸಿ, ಓಡಿ ಹೋಗಿದ್ದು ತಮ್ಮ, ಆದರೆ ಅಣ್ಣನ ಅಪಹರಿಸಿ, ಮಾರಣಾಂತಿಕ ಹಲ್ಲೆ
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.
ಪ್ರಸ್ತುತ ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















