ಕಲ್ಪ ಮೀಡಿಯಾ ಹೌಸ್ | ಯಶವಂತಪುರ |
ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಜಂಕ್ಷನ್ ಮತ್ತು ಉಧ್ನಾ ನಡುವೆ ಏಕಮುಖ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಓಡಿಸಲಿದೆ.
06577 ಸಂಖ್ಯೆಯ ಯಶವಂತಪುರ-ಉಧ್ನಾ ಒನ್-ವೇ ವಿಶೇಷ ಎಕ್ಸ್’ಪ್ರೆಸ್ ರೈಲು Yashawanthapura – Udhna Special Train ಬುಧವಾರ, 13.05.2026 ರಂದು 12.00 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ 16.30 ಗಂಟೆಗೆ ಉದ್ನಾ ತಲುಪಲಿದೆ.
ಮಾರ್ಗಮಧ್ಯೆ, ಈ ರೈಲು ತುಮಕೂರು, ಅರಸೀಕೆರೆ, ದಾವಣಗೆರೆ, ಎಸ್’ಎಂಎಂ ಹಾವೇರಿ, ಎಸ್’ಎಸ್’ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ರಾಯಬಾಗ, ಮೀರಜ್, ಸಾಂಗ್ಲಿ, ಸತಾರಾ, ಪುಣೆ, ಲೋನಾವಾಲ, ಕಲ್ಯಾಣ್ ಮತ್ತು ವಸಾಯಿ ರೋಡ್ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ.
Also read: ಮೇ 3ರಂದು ನಡೆದಿದ್ದ NEET ಪರೀಕ್ಷೆ ರದ್ದು | ಸಿಬಿಐ ತನಿಖೆಗೆ ಆದೇಶ | ಕಾರಣವೇನು?
ಈ ವಿಶೇಷ ರೈಲು 18 ಸ್ಲೀಪರ್ ಕ್ಲಾಸ್ ಬೋಗಿಗಳು, 02 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು 02 ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಮತ್ತು ದಿವ್ಯಾಂಗ ಸ್ನೇಹಿ ಕಂಪಾರ್ಟ್’ಮೆAಟ್ ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 












Comments 1