ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಖ್ಯಾತ ಸಿನಿಮಾ ಹಾಗೂ ಕಿರುತೆರೆ ನಟ ದಿಲೀಪ್ ರಾಜ್ ಅವರು ತೀವ್ರ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ.
ತಮ್ಮ ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ #HeartAttack ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.
ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು.
ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ಈ ಧಾರಾವಾಹಿ ಅತ್ಯಂತ ಜನಪ್ರಿಯವಾಗಿದ್ದು, ದಿಲೀಪ್ ರಾಜ್ ಅವರ ನಟನ ಸಾಮರ್ಥ್ಯ ತೆರೆದಿಟ್ಟಿತ್ತು.
ಅಲ್ಲದೆ, ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















