ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ #CMVijay ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಆ ರಾಜ್ಯದಲ್ಲಿ ಮದ್ಯಪಾನ #Alcohol ಮಾರಾಟ ಹಾಗೂ ಖರೀದಿಗೆ 21 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.
ಈ ಕುರಿತಂತೆ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದ್ದು, ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸಿದೆ. ಇನ್ನು ಮುಂದೆ ಮದ್ಯ ಖರೀದಿ ಹಾಗೂ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಲಾಗಿದೆ.
Also Read>> ಸಾಗರ | ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ
ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈಗಾಗಲೇ ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ #BusTerminal ಸಮೀಪದಲ್ಲಿದ್ದ 717 ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದ ಬೆನ್ನಲ್ಲೇ ಮತ್ತೊಂದು ಕ್ರಮವನ್ನು ಕೈಗೊಂಡಿದೆ.
ಹೇಗೆ ಗುರುತಿಸಲಾಗುತ್ತದೆ?
ರಾಜ್ಯದಾದ್ಯಂತ ಇರುವ ಮಾರುಕಟ್ಟೆ ನಿಗಮದ ಅಂಗಡಿಗಳಲ್ಲಿ ಮದ್ಯ ಖರೀದಿಗೆ ಬರುವ ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲು ಆದೇಶಿಸಲಾಗಿದೆ.
ಯಾವುದೇ ಗ್ರಾಹಕರು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅನುಮಾನ ವ್ಯಕ್ತವಾದರೆ ಅಂತಹ ವ್ಯಕ್ತಿಯ ಆಧಾರ್ ಕಾರ್ಡ್ ಪರಿಶೀಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮದ್ಯದ ಅಂಗಡಿ ಸಮಯ ಕಡಿತ?
ಪ್ರಮುಖವಾಗಿ ತಮಿಳುನಾಡಿನಲ್ಲಿ ಮದ್ಯದ ಅಂಗಡಿಗಳಲ್ಲಿ ಮಾರಾಟದ ಅವಧಿಯನ್ನು ಇಳಿಕೆ ಮಾಡುವ ಕುರಿತಾಗಿ ಸರ್ಕಾರ ಚಿಂತನೆ ನಡೆಸಿದೆ.
ಹಾಲಿ ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚುವ ಪ್ರಸ್ತಾಪವೂ ಚರ್ಚೆಯಲ್ಲಿದೆ ಎಂದು ವರದಿಯಾಗಿದೆ.
ಸಾರ್ವಜನಿಕ ಆರೋಗ್ಯ ಮತ್ತು ಯುವಜನರಲ್ಲಿ ಮಾದಕ ವ್ಯಸನ ತಡೆಯುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು




















