ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಯುಡಿಎಫ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ವಿ.ಡಿ. ಸತೀಶನ್ Kerala CM Satheesan ಆಯ್ಕೆದ್ದಾರೆ.
ಚುನಾವಣಾ ಫಲಿತಾಂಶ ಹೊರಬಿದ್ದ ನಂತರದಿಂದಲೂ ಕೇರಳದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ದೊಡ್ಡ ಕಗ್ಗಾಂಟಾಗಿ ಪರಿಣಮಿಸಿತ್ತು. ಆದರೆ, ಈ ಎಲ್ಲಾ ಗೊಂದಲಗಳಿಗೆ ಇಂದು ತೆರೆ ಬಿದ್ದಿದ್ದು, ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಭರ್ಜರಿ ಜಯ ಸಾಧಿಸಿದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆಯುತ್ತಿದ್ದ ಚರ್ಚೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನಕ್ಕೆ ಬಂದಿದೆ.
Also read: ತಮಿಳುನಾಡಿನಲ್ಲಿ ಮದ್ಯ ಮಾರಾಟ, ಖರೀದಿಗೆ ವಯೋಮಿತಿ ನಿಗದಿ | ಎಷ್ಟು ವರ್ಷ?
ಕಾಂಗ್ರೆಸ್ ನೇತೃತ್ವದ ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭಾರೀ ಜನಾದೇಶ ಪಡೆದಿತ್ತು. ಇದರೊಂದಿಗೆ ಪಿಣರಾಯಿ ನೇತೃತ್ವದ ಎಡಪಕ್ಷದ ಸರ್ಕಾರವನ್ನು ಸೋಲಿಸಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದೆ.
ದೆಹಲಿನಲ್ಲಿ ಹಲವು ದಿನಗಳಿಂದ ನಡೆದ ಚರ್ಚೆಗಳು, ಲಾಬಿ ಹಾಗೂ ಸಮಾಲೋಚನೆಗಳ ಬಳಿಕ, ಕಾಂಗ್ರೆಸ್ ತನ್ನ ವಿಧಾನಮಂಡಲ ಪಕ್ಷದ ನಾಯಕನ ಹೆಸರನ್ನು ಅಂತಿಮವಾಗಿ ಇಂದು ಘೋಷಣೆ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















