ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ನಾನು ರಾಜಕೀಯಕ್ಕೆ ಬಂದಿರುವುದೇ ಸನಾತನ ಹಿಂದೂ ಧರ್ಮದ #Hindu ನಿರ್ಮೂಲನೆಗಾಗಿ ಎಂದು ಟಿವಿಕೆ ಎಂಎಲ್‌ಎ ವಿಎಂಎಸ್ ಮುಸ್ತಫಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತಾಗಿ ಮತ್ತೊಮ್ಮೆ ಹೇಳಿಕೆ ನೀಡಿರುವ #TamilNadu ತಮಿಳುನಾಡಿನ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.
Also Read>> Annual Disaster Management Mock Drill Conducted at Harihar Railway Station
ನಾನು ಪೆರಿಯಾರ್ ರಾಮಸ್ವಾಮಿ ಅಯ್ಯರ್ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದು, ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ತಮಿಳುನಾಡು ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಈ ಸನಾತನ ಎನ್ನುವುದು ಜನರನ್ನು ಒಡೆಯುತ್ತದೆ. ಹೀಗಾಗಿ ಇದನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡು ವಿಧಾನಸಭೆಯಲ್ಲಿ ಅವರು ಹೇಳಿದ್ದರು.
ಬಿಜೆಪಿ ನಾಯಕರ ಆಕ್ರೋಶ
ಸನಾತನ ಧರ್ಮದ ಕುರಿತಾಗಿ ಉದಯನಿಧಿ ಸ್ಟಾಲಿನ್ ಹಾಗೂ ಮುಸ್ತಫಾ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Also Read>> ಮೇ 17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ
ತಮಿಳುನಾಡು ಬಿಜೆಪಿ ನಾಯಕ ನಾರಾಯಣ ತಿರುಪತಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಮುಸ್ತಫಾ ಈ ರೀತಿಯ ಹೇಳಿಕೆಯನ್ನು #Islam ಇಸ್ಲಾಂ ಹಾಗೂ ಕ್ರಿಶ್ಚಿಯನ್ ಧರ್ಮವನ್ನು ಸೇರಿಸಿಕೊಂಡು ಹೇಳು. ಅದನ್ನು ಬಿಟ್ಟು ಕೇವಲ ಹಿಂದೂ ಧರ್ಮವನ್ನು ಗುರಿ ಮಾಡುವುದು ತಪ್ಪು, ಇವನು ಸನಾತನಿಗಳ ಭಾವನೆಗೆ ಧಕ್ಕೆ ಉಂಟುಮಾಡಿದ್ದೇನೆಂದು ಬರೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

















