ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೀಟ್ ಯುಜಿ ಪರೀಕ್ಷೆಯಲ್ಲಿ #NEETUGExam ಅಕ್ರಮ ನಡೆದು ಪರೀಕ್ಷೆ ರದ್ದುಗೊಂಡ ಬೆನ್ನಲ್ಲೇ ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, #DharmendraPradhan ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ.
Also Read>> ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ
ಈ ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಇದರ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ಇದನ್ನು ಸಚಿವಾಲಯ ಸರಿಪಡಿಸಲಿದೆ ಎಂದಿದ್ದಾರೆ.
ಇನ್ನು, ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು #NEETExam ರದ್ದು ಮಾಡಲಾಗಿದ್ದು, ಜೂನ್ 21ರಂದು ಮರುಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಪ್ರಮುಖವಾಗಿ, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ವಿಧಾನದಲ್ಲಿ ನಡೆಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
Also Read>> ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್
ನಡೆಯುತ್ತಿರುವ ಅಕ್ರಮಗಳ ವಿಷಯದಲ್ಲಿ ನಾವು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ. ಇದರಿಂದ ಮಕ್ಕಳು ತಮ್ಮ ಹಕ್ಕುಗಳಿಂದ ವಂಚಿರಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೇ 3ರಂದು ಪರೀಕ್ಷೆ ನಡೆದ ಬಳಿಕ ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿತ್ತು.
ಪರೀಕ್ಷೆಗೂ ಮುನ್ನ ಕೆಲವೆಡೆ ನೀಡಲಾಗಿದ್ದ ಗೆಸ್ ಪೇಪರ್’ನಲ್ಲಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಹೆಚ್ಚಿನ ಪ್ರಶ್ನೆಗಳು ಬಂದಿದ್ದವು ಎಂದು ಆರೋಪಿಸಲಾಗಿತ್ತು. ಕೂಡಲೇ ಉನ್ನತ ಶಿಕ್ಷಣ ಸಚಿವಾಲಯ ಈ ಸಂಬAಧ ವಿಚಾರಣೆ ಆರಂಭಿಸಿ, ತನಿಖೆ ಹಸ್ತಾಂತರಿಸಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿತ್ತು ಎಂದರು.
Also Read>> ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?
ಮೇ 12ರಂದು ಗೆಸ್ ಪೇಪರ್ ಹೆಸರಲ್ಲಿ ಮೂಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಖಚಿತವಾಗಿದೆ. ಇದರಲ್ಲಿ ಯಾವುದೇ ರೀತಿಯ ಅನುಮಾನಗಳಿಲ್ಲ. ಇದರ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳುತ್ತೇವೆ. ಬಳಿಕ ಮೇ 13ರಂದು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆವು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು


















