ಆರ್’ಜಿ ಕರ್ ಪ್ರಕರಣದಲ್ಲಿ ಸಿಬಿಐ ನಡೆಸುತ್ತಿರುವ ತನಿಖೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಲೀ ಅಥವಾ ಮಧ್ಯಪ್ರವೇಶಿಸುವುದಾಗಲಿ ಮಾಡಿಲ್ಲ, ಮಾಡುವುದೂ ಇಲ್ಲ.
-ಸುವೇಂಧು ಅಧಿಕಾರಿ, ಮುಖ್ಯಮಂತ್ರಿ, ಪಶ್ಚಿಮ ಬಂಗಾಳ
ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತಾ |
ಇಡೀ ದೇಶ ವ್ಯಾಪಿ ಖಂಡನೆಗೆ ಕಾರಣವಾಗಿದ್ದ ಆರ್’ಜಿ ಕರ್ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ #RGKarCase ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸುವೇಂಧು ಅಧಿಕಾರಿ #SuvendhuAdhikari ಮಾತನಾಡಿದ್ದು, ಆರ್’ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯ ಆರಂಭಿಕ ಹಂತದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ಶುಕ್ರವಾರ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ತಿಳಿಸಿದ್ದಾರೆ.
Also Read>> ಮೇ 18ರಂದು ಮೈಸೂರು ರೈಲು ವಸ್ತು ಸಂಗ್ರಹಾಲಯಕ್ಕೆ ಉಚಿತ ಪ್ರವೇಶ | ಸದುಪಯೋಗಮಾಡಿಕೊಳ್ಳಿ
ರಾಜ್ಯ ಸಚಿವಾಲಯದಲ್ಲಿ ನಿರ್ಧಾರ ಪ್ರಕಟಿಸಿದ ಸಿಎಂ ಅಧಿಕಾರಿ, ಕೋಲ್ಕತ್ತಾದ ಮಾಜಿ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಮತ್ತು ಮಾಜಿ ಉಪ ಆಯುಕ್ತರಾದ ಇಂದಿರಾ ಮುಖರ್ಜಿ ಮತ್ತು ಅಭಿಷೇಕ್ ಗುಪ್ತಾ ಅವರನ್ನು ಅಮಾನತುಗೊಳಿಸಲು ಆದೇಶ ನೀಡಲಾಗಿದೆ ಎಂದಿದ್ದಾರೆ.
ಈ ಮೂವರು ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ಲೋಪವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆಯ ಪೋಷಕರಿಗೆ ಪ್ರಕರಣದಿಂದ ಹಿಂದೆ ಸರಿಯುವಂತೆ ಲಂಚದ ಹಣ ನೀಡಲಾಗಿದೆ ಎಂದು ಆರೋಪಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಅಲ್ಲದೇ, ಆರ್’ಜಿ ಕರ್ ಪ್ರಕರಣದಲ್ಲಿ ಸಿಬಿಐ ನಡೆಸುತ್ತಿರುವ ತನಿಖೆಯಲ್ಲಿ ರಾಜ್ಯ ಸರ್ಕಾರ ಭಾಗಿಯಾಗಲೀ ಅಥವಾ ಮಧ್ಯಪ್ರವೇಶಿಸುವುದಾಗಲಿ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಸಿಎಂ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಯವರ ಮಾರ್ಗದರ್ಶನದಲ್ಲಿ ಶಿಸ್ತು ಕ್ರಮಗಳು ಮತ್ತು ಇಲಾಖಾ ತನಿಖೆಯನ್ನು ರಾಜ್ಯ ಗೃಹ ಕಾರ್ಯದರ್ಶಿಯವರು ಮುನ್ನಡೆಸುತ್ತಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು


















