ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ Belgaum Railway Station ಇಂದು ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ (ಮುಂಬೈ) ನಡುವೆ ಸಂಚರಿಸುವ ರೈಲು ಸಂಖ್ಯೆ 16553/54ಕ್ಕೆ ಚಾಲನೆ ನೀಡಲಾಯಿತು.
ಸಂಸದ ಜಗದೀಶ ಶೆಟ್ಟರ MP Jagadish Shettar ಅವರು ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ರೈಲು ಜನಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದ್ದು, ಜನರು ಹೆಚ್ಚಿನ ಪ್ರಮಾಣದಲ್ಲಿ ರೈಲು ಪ್ರಯಾಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಳೆದ ಹಲವು ವರ್ಷಗಳಲ್ಲಿ ಭಾರತೀಯ ರೈಲ್ವೆಯಲ್ಲಿ ಗಮನಾರ್ಹ ಪ್ರಗತಿ ಸಾಧನೆಯಾಗಿದೆ ಎಂದು ಅವರು ತಿಳಿಸಿದರು.
Also read: ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?
ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಸಂಬAಧಿತ ಅಡೆತಡೆಗಳು ನಿವಾರಣೆಯಾಗಬೇಕಿದ್ದು, ಈ ಕುರಿತು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಉಪ ಮೇಯರ್ ಹನುಮಂತ ಕೊಂಗಲಿ, ಖ್ಯಾತ ವೈದ್ಯರಾದ ರವಿ ಪಾಟೀಲ, ZRUCC ಸದಸ್ಯರಾದ ಚಿದಾನಂದ ದೇಮಶೆಟ್ಟಿ ಹಾಗೂ ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕರಾದ ಪ್ರೇಮ ಚಂದ್ರ ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















