ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ KSRTC ಸಂಘಟನೆಗಳು ಮೇ 20ರ ನಾಳೆ ಕರೆ ನೀಡಿದ್ದ ಮುಷ್ಕರಕ್ಕೆ ರಾಜ್ಯ ಹೈಕೋರ್ಟ್ High Court ಅಂಕುಶ ಹಾಕಿದ್ದು, ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.
ಈ ಕುರಿತಂತೆ ಸೂಚನೆ ನೀಡಿರುವ ಹೈಕೋರ್ಟ್, ಯಾವುದೇ ಕಾರಣಕ್ಕೂ ಮುಷ್ಕರ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ನ್ಯಾಯಾಲಯದ ಈ ಸೂಚನೆಯಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಇದೇ ವೇಳೆ ಪ್ರಕರಣ ಕುರಿತಂತೆ ರಾಜ್ಯ ಸರ್ಕಾರಕ್ಕೂ ಸಹ ಹೈಕೋರ್ಟ್ ನೋಟೀಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ ಶೇ.12.5ರಷ್ಟು ವೇತನ ಹೆಚ್ಚಳ ಮಾಡಿದ್ದು, ಮತ್ತೆ ಮುಷ್ಕರ ಮಾಡುವುದು ಸರಿಯಲ್ಲ. ಮುಷ್ಕರ ಮಾಡದಂತೆ ಇಂದು ತಡೆಹಿಡಿಯುತ್ತೇವೆ. ಸರ್ಕಾರದ ಜೊತೆಗೆ ಮಾತುಕತೆ ನಡೆಸಿ, ಗುರುವಾರ ಮತ್ತೆ ವಿಚಾರಣೆ ನಡೆಸೋಣ ಎಂದು ಹೇಳಿದೆ.
Also read: ಶಿವಮೊಗ್ಗ | ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ | ಘಟನೆ ನಡೆದಿದ್ದು ಹೇಗೆ?
ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ಗೆ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕ ಪಿಐಎಲ್ ಸಲ್ಲಿಸಿದ್ದರು. KESMA ಅಡಿ ಜ.1ರಿಂದ ಜೂನ್ 30ರವರೆಗೆ ಮುಷ್ಕರ ನಿರ್ಬಂಧಿಸಲಾಗಿದೆ. 2025ರ ಜುಲೈ 18ರ ಕಾರ್ಮಿಕ ಆಯುಕ್ತರ ರಾಜಿ ಸಂಧಾನ ಪ್ರಕ್ರಿಯೆ ಮುಂದುವರೆದಿದೆ.
ರಾಜಿ ಸಂಧಾನದ ಮುಂದಿನ ವಿಚಾರಣೆ ಮೇ 25ಕ್ಕೆ ನಿಗದಿಯಾಗಿದೆ. ಈ ಮಧ್ಯೆ ಮುಷ್ಕರ ನಡೆಸುವುದು ಕಾನೂನುಬಾಹಿರ. 14 ದಿನಗಳ ನೋಟಿಸ್ ಬದಲು ಮುಷ್ಕರಕ್ಕೆ 7 ದಿನಗಳ ನೋಟಿಸ್ ನೀಡಲಾಗಿದೆ. KESMA ಪೂರಕ ಪರೀಕ್ಷೆಗಳೂ ಇದೇ ಅವಧಿಯಲ್ಲಿ ನಿಗದಿಯಾಗಿರುವ ಕಾರಣ ಮೇ 20ರಂದು ಕರೆ ನೀಡಿರುವ ಸಾರಿಗೆ ನೌಕರರ ಮುಷ್ಕರ ನಿರ್ಬಂಧಿಸಲು ಮನವಿ ಮಾಡಲಾಗಿತ್ತು.
ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು, ಇದೇ ವೇಳೆ ಪಿಐಎಲ್ ಅರ್ಜಿದಾರರ ಬಗ್ಗೆ ಅಚ್ಚರಿ ಕೂಡ ವ್ಯಕ್ತಪಡಿಸಿದೆ.
ಸಾರಿಗೆ ನೌಕರರ ಬೇಡಿಕೆಗಳೇನು?
- ಶೇ.25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆಗೆ ಸರ್ಕಾರ ಕೊಟ್ಟಿದ್ದು ಶೇ.12.5ರಷ್ಟು ಮಾತ್ರ
- 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು. ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು
- 26 ತಿಂಗಳ ಬಾಕಿ ವೇತನ ಒಂದೇ ಕಂತಿನಲ್ಲಿ ಕೊಡಬೇಕು, ಭತ್ಯೆ ಹೆಚ್ಚಳ ಮಾಡಬೇಕು
- ಕೋವಿಡ್ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ
- ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಲು 1 ತಿಂಗಳು ಗಡವು
- 26 ತಿಂಗಳ ಬಾಕಿ ಹಣ 1,272 ಕೋಟಿ ರಿಲೀಸ್ ಮಾಡಬೇಕು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















