ಕಲ್ಪ ಮೀಡಿಯಾ ಹೌಸ್ | ಮೈಸೂರು |
ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು ಅಗ್ರಹಾರ ಮುಖ್ಯ ರಸ್ತೆಯಲ್ಲಿರುವ ಕಾಶಿ ವಿಶ್ವನಾಥ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಅಧಿಕ ಮಾಸೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ ಮೇ 20ರ ಸಂಜೆ 5.30ಕ್ಕೆ ಯುವ ಪ್ರತಿಭೆಗಳಾದ ಕೌಸಲ್ಯಾ ರಘುರಾಂ ಮತ್ತು ಎ.ಆರ್. ಅಪ್ರಮೇಯ ಅವರಿಂದ ದಾಸ ಲಹರಿ- ಜುಗಲ್ ಬಂದಿ ಗಾಯನ ನೆರವೇರಲಿದೆ.
ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.
ಪರಿಚಯ:
ಎ.ಆರ್. ಕೌಸಲ್ಯಾ: ಕೌಸಲ್ಯಾ ಅವರು ನಾಡಿನ ಮಹತ್ವದ ಗಾಯಕರಲ್ಲಿ ಅಗ್ರಪಂಕ್ತಿಯಲ್ಲಿರುವ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ ಅವರ ವಿದ್ಯಾರ್ಥಿ. ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್‌ನಲ್ಲಿ ಅಂತಿಮ ಸೆಮಿಸ್ಟಾರ್ ಬಿ.ಇ.ಅಧ್ಯಯನ ಮಾಡುತ್ತಿದ್ದಾರೆ. ವಿದುಷಿ ರಜನಿ ರಾಮಧ್ಯಾನಿ ಅವರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತ #CarnaticMusic ಸೀನಿಯರ್ ಹಂತದ ಕಲಿಕೆಯಲ್ಲಿ ಇದ್ದಾರೆ. ಈಗಾಗಲೇ ಹಲವು ಮಠ ಮಾನ್ಯಗಳ ವೇದಿಕೆಗಳಲ್ಲಿ ಗಾಯನ ಪ್ರಸ್ತುತ ಪಡಿಸಿದ್ದಾರೆ. ತಿರುಮಲ ತಿರುಪತಿಯ ಟಿಟಿಡಿ- ದಾಸ ಸಾಹಿತ್ಯ ಪ್ರಾಜೆಕ್ಟ್‌ನ ಗಾಯಕಿಯಾಗಿ ಈಗಾಗಲೇ ತಿರುಪತಿಯಲ್ಲಿ ಹಲವು ಬಾರಿ ದಾಸರಪದ ಗಾಯನ ಕಛೇರಿ ನಡೆಸಿಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ
ಎ. ಆರ್. ಅಪ್ರಮೇಯ: ಹಾಡುಗಾರಿಕೆಯನ್ನು ಅನನ್ಯ ಭಾವದಿಂದ ಸ್ವೀಕರಿಸಿದ ಯುವಕ. ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದಲ್ಲಿ ಶಾಸ್ತ್ರೀಯ ಸಂಗೀತ ಸೀನಿಯರ್ ಹಂತದ ಕಲಿಕೆಯಲ್ಲಿ ಇದ್ದಾರೆ. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಗಾಯನ ಸ್ಪರ್ಧೆಗಳಲ್ಲಿ ಅನೇಕ ಬಹುಮಾನಗಳು ದೊರೆಕಿವೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ, ಕೇಂದ್ರೀಯ ವಿದ್ಯಾಲಯ ಸಂಘಟನ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ‘ಕಲಾ ಉತ್ಸವ್’ ಸ್ಪರ್ಧೆಯಲ್ಲಿ ಎರಡು ಬಾರಿ ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೈಸೂರಿನ ಸದ್ವಿದ್ಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ) ಈ ಬಾರಿ ಶೇ. 95 ಅಂಕದೊಂದಿಗೆ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















