ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಮಕೂರು ಜಿಲ್ಲೆಯ ಗುಬ್ಬಿಯ ಶ್ರೀ ಚಿದಂಬರ ಆಶ್ರಮದಲ್ಲಿ ಮೇ 24ರಂದು ವಿಕಾಸ ಸಮಾವೇಶ Vikasa Samavesha ಮತ್ತು ಸಮಾನ ಮನಸ್ಕ ಮಾಧ್ಯಮ ಮಿತ್ರರ ವೇದಿಕೆ ಬೆಂಗಳೂರಿನ ಆಶ್ರಯದಲ್ಲಿ ‘ವಿಕಾಸ ಸಂಭ್ರಮ-2026’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾಧಕರಿಗೆ ಗೌರವ ಕಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ವೇದಿಕೆಯ ರಾಜ್ಯ ಪ್ರಧಾನಕಾರ್ಯದರ್ಶಿ ಹನುಮೇಶ್ ಯಾವಗಲ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿಕಾಸ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
Also read: ಬೆಂಗಳೂರು ಕ್ಯಾಂಟ್ – ತೆಂಕಾಸಿ – ಸೆಂಗೋಟೈ ನಡುವೆ ವಿಶೇಷ ರೈಲು
ಇದೇ ವೇಳೆ ಹಿರಿಯ ಕ್ರೀಡಾ ಪತ್ರಕರ್ತ ಡಿ. ವಿನಾಯಕ ದೇಶಪಾಂಡೆ ಅವರ ಸ್ಮರಣಾರ್ಥ ಕ್ರೀಡಾ ಪತ್ರಕರ್ತರೊಬ್ಬರಿಗೆ ‘ಡಿ. ವಿನಾಯಕ ದೇಶಪಾಂಡೆ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ.
ಹಾಗೆಯೇ ‘ನಮ್ಮ ಹಿರಿಯ ನಮ್ಮ ಹೆಮ್ಮೆ’ ಮಾಲಿಕೆಯಡಿ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಲಾಗುವುದು.
ಜೊತೆಗೆ ಗುಬ್ಬಿಯಲ್ಲಿ ನಡೆಯುವ ಈ ಅಖಿಲ ಭಾರತ ಕಾರ್ಯಕ್ರಮದಲ್ಲಿ ನೂರಾರು ಹಿರಿಯ ಪತ್ರಕರ್ತರು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷರಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ್ ಯಾವಗಲ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ವಿಕಾಸ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಶ್ ಯಾವಗಲ್ – 98440 30946, ರಾಜ್ಯ ಉಪಾಧ್ಯಕ್ಷ, ಮಂದಾರ ರಾಜೇಶ್ ಭಟ್ – 8088188339 ಹಾಗೂ ಜಿಲ್ಲಾ ಸಂಚಾಲಕರಾದ ಆದಿತ್ಯಪ್ರಸಾದ್- 9449508060 ಅವರನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















